ಕೊರೋನಾ ಎರಡನೇ ಅಲೆ ನಿಯಂತ್ರಣದಲ್ಲಿ ಯೋಗಿ ಸರ್ಕಾರ ಸಂಪೂರ್ಣ ವಿಫಲ: ಪ್ರಿಯಾಂಕಾ ವಾದ್ರಾ
ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿ: ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಕೊರೋನಾ ನಿರ್ವಹಣೆ ಉತ್ತರ ಪ್ರದೇಶ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಮತ್ತೊಂದು ಕನ್ನಡಿಯಾಗಿದೆ.
ದುರಂಹಕಾರ ಮತ್ತು ನಿರಂಕುಶಾಧಿಕಾರ ಹಾಗೂ ಅಮಾನವೀಯತೆಯಿಂದ ಜನರ ಜೊತೆ ಸರ್ಕಾರ ವರ್ತಿಸುತ್ತಿದೆ ಎಂದು ದೂರಿದ್ದಾರೆ. ಕೊರೊನಾ ವೈರಸ್ ಪ್ರಕರಣಗಳ ತೀವ್ರ ಏರಿಕೆಯಿಂದಾಗಿ ಪ್ರಿಯಾಂಕಾ ಪ್ರತಿಕ್ರಿಯೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಬುಧವಾರ 33,214 ಹೊಸ ಪ್ರಕರಣಗಳು ಮತ್ತು 187 ಸಾವುಗಳು ದಾಖಲಾಗಿವೆ ಎಂದು ಸರ್ಕಾರ ಹೇಳಿದೆ.
ಯೋಗಿ ಸರ್ಕಾರ ಜನರ ಪರವಾಗಿ ಕೆಲಸ ಮಾಡುವುದನ್ನು ನಿಲ್ಲಿಸಿದೆ, ಜನರಿಗೆ ಅಗತ್ಯವಾದ ನೆರವು ಸೌಲಭ್ಯ ನೀಡುವುದು ಸರ್ಕಾರದ ಮೂಲಭೂತ ಹಕ್ಕಾಗಿದೆ. ಯಾವುದೇ ಸಿದ್ಧತೆ, ಪೂರ್ವಾಲೋಚನೆಯಿಲ್ಲದೇ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತಿರುವುದೇ ಇದಕ್ಕೆಲ್ಲಾ ಕಾರಣ ಎಂದು ದೂರಿದ್ದಾರೆ,
ಪ್ರಪಂಚದಾದ್ಯಂತದ ದೇಶಗಳು ಎರಡನೇ ಅಲೆ ಎದುರಿಸುತ್ತಿವೆ, ನಾವು ಅವರಿಂದ ಏನು ಕಲಿತಿದ್ದೇವೆ? ತಯಾರಿಸಲು ನಾವು ಮೊದಲ ಮತ್ತು ಎರಡನೆಯ ಅಲೆಯ ನಡುವಿನ ಸಮಯವನ್ನು ನಾವು ಹೇಗೆ ಬಳಸಿದ್ದೇವೆ? ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


