ದೇಶ

ಗಂಗಾ ನದಿಗೆ ಉರುಳಿಬಿದ್ದ ಪಿಕಪ್‌ ವಾಹನ: ಕನಿಷ್ಠ ಒಂಬತ್ತು ಮಂದಿ ಸಾವು

ಬಿಹಾರದಲ್ಲಿ ಪ್ರಯಾಣಿಕರ ಹೊತ್ತೊಯುತ್ತಿದ್ದ ಪಿಕಪ್‌ ವಾಹನ ನದಿಗೆ ಉರುಳು ಬಿದ್ದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗಂಗಾ ನದಿಗೆ ಉರುಳಿಬಿದ್ದ ಪಿಕಪ್‌ ವಾಹನ: ಕನಿಷ್ಠ ಒಂಬತ್ತು ಮಂದಿ ಸಾವು
ನದಿಗೆ ಉರುಳಿದ ವಾಹನ
Published On :

ಪಾಟ್ನಾ: ಬಿಹಾರದಲ್ಲಿ ಪ್ರಯಾಣಿಕರ ಹೊತ್ತೊಯುತ್ತಿದ್ದ ಪಿಕಪ್‌ ವಾಹನ ನದಿಗೆ ಉರುಳು ಬಿದ್ದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಾಟ್ನಾದ ದಾನಪುರ ಪ್ರದೇಶದಲ್ಲಿ ಶುಕ್ರವಾರ ಗಂಗಾ ನದಿಯಲ್ಲಿ ದೋಣಿಗಳನ್ನು ಸೇರಿಸಿ ನಿರ್ಮಿಸಿದ ಸೇತುವೆಯ ಮೇಲಿನಿಂದ ಪಿಕಪ್‌ ಜೀಪ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿಬಿದ್ದಿದೆ. ಈ ವೇಳೆ 9 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ ದಾನಪುರದ ಚಿತ್ರಕೂಟ ನಗರದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಅಖಿಪುರಕ್ಕೆ ವಾಪಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ನದಿಗೆ ಉರುಳಿದೆ. ವಾಹನದಲ್ಲಿ 13 ಮಂದಿ ಇದ್ದರು. ವಾಹನ ನದಿಗೆ ಉರುಳಿದಾಗ ನಾಲ್ವರು ಈಜಿ ಪಾರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ. 

ಎನ್‌ಡಿಆರ್‌ಎಫ್‌ ಸಿಬ್ಬಂದಿ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.