ಕೋವಿಡ್-19: ಆಕ್ಸಿಜನ್ ನಿಯೋಜನೆಗಾಗಿ ಸಮಿತಿ ರಚಿಸಿದ ಕೇಂದ್ರ ಸರ್ಕಾರ
ಮಾರಕ ಕೊರೋನಾ ವೈರಸ್ ಸೋಂಕು ಪ್ರಮಾಣ ಹೆಚ್ಚಳವಾಗಿರುವಂತೆಯೇ ಕೇಂದ್ರ ಸರ್ಕಾರ ಆಕ್ಸಿಜನ್ ಸರಬರಾಜು ಮತ್ತು ನಿಯೋಜನೆಗಾಗಿ ಸಮಿತಿ ರಚನೆ ಮಾಡಿದೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕು ಪ್ರಮಾಣ ಹೆಚ್ಚಳವಾಗಿರುವಂತೆಯೇ ಕೇಂದ್ರ ಸರ್ಕಾರ ಆಕ್ಸಿಜನ್ ಸರಬರಾಜು ಮತ್ತು ನಿಯೋಜನೆಗಾಗಿ ಸಮಿತಿ ರಚನೆ ಮಾಡಿದೆ.
ಹೌದು.. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನಡೆದ 11 ರಾಜ್ಯಗಳ ಸಿಎಂಗಳು ಕೋವಿಡ್-19 ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಕೇಂದ್ರಸರ್ಕಾರದಿಂದ ಆಮ್ಲಜನಕ ಹಂಚಿಕೆಯಾದ ಕೂಡಲೇ, ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಅಗತ್ಯವಿರುವಂತೆ ಆಮ್ಲಜನಕವನ್ನು ತಲುಪಿಸಲು ಈ ಸಮನ್ವಯ ಸಮಿತಿಯು ನೆರವಾಗಲಿದೆ ಎನ್ನಲಾಗಿದೆ.
ಸಭೆಯಲ್ಲಿ ಆಕ್ಸಿಜನ್ ಟ್ಯಾಂಕರ್‌ಗಳ ಪ್ರಯಾಣದ ಸಮಯ ಮತ್ತು ವಹಿವಾಟು ಸಮಯವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಸಾಧ್ಯವಿರುವ ಎಲ್ಲ ಆಯ್ಕೆಗಳ ಬಗ್ಗೆ ಕಾರ್ಯನಿರ್ವಹಿಸುತ್ತಿದೆ ಎಂದು ಮೋದಿ ಹೇಳಿದ್ದಾರೆ. ಇದಕ್ಕಾಗಿ ರೈಲ್ವೆ ಇಲಾಖೆ ಕೂಡ ಆಕ್ಸಿಜನ್ ಎಕ್ಸ್‌ಪ್ರೆಸ್ ಅನ್ನು ಪ್ರಾರಂಭಿಸಿದ್ದು, ಒಂದು ಮಾರ್ಗದ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಖಾಲಿ ಆಕ್ಸಿಜನ್ ಟ್ಯಾಂಕರ್‌ಗಳನ್ನು ಸಹ ವಾಯುಪಡೆಯಿಂದ ಸಾಗಿಸಲಾಗುತ್ತಿದೆ. ಅಲ್ಲದೆ 23 ಮೊಬೈಲ್ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಜರ್ಮನಿಯಿಂದ ವಿಮಾನದಲ್ಲಿ ಭಾರತಕ್ಕೆ ಸಾಗಿಸಲಾಗುತ್ತಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಕೋವಿಡ್-19 ರೋಗಿಗಳಿಗೆ ಪೂರೈಸುವ ಎಎಫ್‌ಎಂಎಸ್ ಆಸ್ಪತ್ರೆಗಳಲ್ಲಿ ಇವುಗಳನ್ನು ನಿಯೋಜಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದ್ದು, ಆಮ್ಲಜನಕ ಉತ್ಪಾದಿಸುವ ಪ್ಲಾಂಟ್ ಗಳು ಒಂದು ವಾರದೊಳಗೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


