ಕೋವಿಡ್-19 ಚಿಕಿತ್ಸೆಗೆ ಹೊಸ ಔಷಧ: ಝೈಡಸ್ ಕ್ಯಾಡಿಲಾದ 'ವಿರಾಫಿನ್' ತುರ್ತು ಬಳಕೆಗೆ 'ಡಿಸಿಜಿಐ' ಅನುಮತಿ
ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಮತ್ತೊಂದು ಬಲ ಬಂದಿದ್ದು, ಕೋವಿಡ್-19 ಚಿಕಿತ್ಸೆಗೆ ಹೊಸ ಔಷಧ ಸೇರ್ಪಡೆಯಾಗಿದೆ.

ನವದೆಹಲಿ: ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಮತ್ತೊಂದು ಬಲ ಬಂದಿದ್ದು, ಕೋವಿಡ್-19 ಚಿಕಿತ್ಸೆಗೆ ಹೊಸ ಔಷಧ ಸೇರ್ಪಡೆಯಾಗಿದೆ.
ಹೌದು.. ಕೊರೊನಾ ಸೋಂಕಿತರ ಚಿಕಿತ್ಸೆಗೆ ಹೊಸ ಔಷಧ ಬಳಸಲು ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿಅನುಮತಿ ನೀಡಿದ್ದು, ಝೈಡಸ್ ಕ್ಯಾಡಿಲಾ ಸಂಸ್ಥೆಯ ವಿರಾಫಿನ್ ಔಷಧವನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಲು ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ (ಡಿಸಿಜಿಐ) ಬಳಸಲು ಅನುಮತಿ ನೀಡಿದೆ.
ಮೂಲಗಳ ಪ್ರಕಾರ ಲಘು ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವವರಿಗೆ ಔಷಧದ ರೂಪದಲ್ಲಿ ಝೈಡಸ್ ಕ್ಯಾಡಿಲ್ಲಾ ಸಂಸ್ಥೆಯ 'ವಿರಾಫಿನ್' ಔಷಧ ಬಳಸಲು ಅನುಮತಿ ನೀಡಲಾಗಿದೆ. ಈ ಹಿಂದೆ ನಡೆದಿದ್ದ ಈ ಔಷಧದ ಪ್ರಯೋಗ ಯಶಸ್ವಿಯಾಗಿತ್ತು. ಒಂದು ಡೋಸ್ ಔಷಧಿ ಬಳಕೆಯು ಕೊರೊನಾ ಸೋಂಕಿತರಲ್ಲಿ ಚೇತರಿಕೆ ಉಂಟುಮಾಡಿದೆ ಎಂದು ಕಂಪನಿ ತಿಳಿಸಿದೆ.
ಚರ್ಮದ ಒಳಪದರಕ್ಕೆ ಕೊಡುವ ವಿರಾಫಿನ್ನಲ್ಲಿ PegIFN ಔಷಧವಿದ್ದು, ಈ ಸಿಂಗಲ್ ಡೋಸ್ ಔಷಧಿ ವೈರಾಣು ಸೋಂಕು ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ಕೊರೊನಾ ಸೋಂಕು ಪ್ರಕರಣಗಳಲ್ಲೂ ಪರಿಣಾಮಕಾರಿ ಎಂದು ಕ್ಲಿನಿಕಲ್ ಪರೀಕ್ಷೆಗಳಲ್ಲಿ ಸಾಬೀತಾಗಿದೆ ಎಂದು ಕಂಪನಿಯು ಹೇಳಿಕೊಂಡಿದೆ.
ಆಮ್ಲಜನಕ ನೀಡಬೇಕಾದ ಅಗತ್ಯತೆ ಕಡಿಮೆ ಮಾಡುವ ಔಷಧಿ
ಕೋವಿಡ್-19 ರೋಗಿಗಳಿಗೆ ಈ 'ವಿರಾಫಿನ್' ಔಷಧಿ ನೀಡಿದಾಗ ಕೃತಕ ಆಮ್ಲಜನಕವನ್ನು ನೀಡಬೇಕಾದ ಅಗತ್ಯವೂ ಹೆಚ್ಚಿನ ಸಂದರ್ಭಗಳಲ್ಲಿ ಕಂಡುಬರಲಿಲ್ಲ. ಕೊರೊನಾ ಸೋಂಕಿನಿಂದ ಉಂಟಾಗುವ ಉಸಿರಾಟದ ಹಲವು ಸಮಸ್ಯೆಗಳನ್ನು ವಿರಾಫಿನ್ ಪರಿಣಾಮಕಾರಿಯಾಗಿ ತಡೆದದ್ದು ಪ್ರಯೋಗಗಳ ವೇಳೆ ದಾಖಲಾಗಿದೆ. ಕೊರೊನಾದಿಂದ ರೋಗಿಗಳು ಚೇತರಿಸಿಕೊಂಡ ನಂತರ ಕಾಣಿಸುವ ಕೆಲ ಇತರ ಆರೋಗ್ಯದ ಸಮಸ್ಯೆಗಳನ್ನೂ ಇದು ತಡೆಯಬಲ್ಲದು. ವಿರಾಫಿನ್ ಚಿಕಿತ್ಸೆಯ ನಂತರ ಕೊರೊನಾ ಸೋಂಕು ದೃಢಪಟ್ಟಿದ್ದ ಶೇ 91.15ರಷ್ಟು ರೋಗಿಗಳಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆ ವೇಳೆ 7 ದಿನಗಳಲ್ಲಿ ನೆಗೆಟಿವ್ ವರದಿ ಬಂದಿತ್ತು ಎಂದು ಕಂಪನಿ ಹೇಳಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


