ಲಸಿಕೆ ವಿತರಣೆಯಲ್ಲಿ ತಾರತಮ್ಯ; ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರದ ಒಲವು: ಮಮತಾ ಬ್ಯಾನರ್ಜಿ ಆರೋಪ
ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರವು ಕೆಲವು ರಾಜ್ಯಗಳ ಮೇಲೆ ಒಲವು ತೋರುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದ್ದಾರೆ.

ಕೊಲ್ಕೋತಾ: ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರವು ಕೆಲವು ರಾಜ್ಯಗಳ ಮೇಲೆ ಒಲವು ತೋರುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದ್ದಾರೆ.
ನವದೆಹಲಿ, ಪಶ್ಚಿಮ ಬಂಗಾಳಕ್ಕೆ ಮೀಸಲಾದ ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶಕ್ಕೆ ತಿರುಗಿಸಿದೆ ಎಂದು ಅವರು ದೂರಿದ್ದಾರೆ.
ಗುಜರಾತ್ ನ ಜನಸಂಖ್ಯೆಯ ಶೇ, 60 ರಷ್ಟು ಪ್ರಮಾಣದ ಲಸಿಕೆ ಹೊಂದಿದೆ, ಬೇರೆ ರಾಜ್ಯಗಳಿಗೆ ಕೇವಲ 15 ರಿಂದ 20 ರಷ್ಟು ಪ್ರಮಾಣದಲ್ಲಿ ಮಾತ್ರ ನೀಡಲಾಗಿದೆ, ಗುಜರಾತ್ ನ ಬಿಜೆಪಿ ಕಚೇರಿಗಳಲ್ಲಿ ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಆಪಾದಿಸಿದ್ದಾರೆ.
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಪಶ್ಚಿಮ ಬಂಗಾಳಕ್ಕೆ ಆಮ್ಲಜನಕವನ್ನು ಪೂರೈಸುತ್ತಿತ್ತು. ಈಗ ಅದೇ ಸೇಲ್ ಅದೇ ಆಮ್ಲಜನಕವನ್ನು ಉತ್ತರ ಪ್ರದೇಶಕ್ಕೆ ಪೂರೈಸಲು ಕೇಂದ್ರದಿಂದ ನಿನ್ನೆ ಸೂಚನೆ ಬಂದಿದೆ. ಪಶ್ಚಿಮ ಬಂಗಾಳ ಭಿಕ್ಷೆ ಬೇಡುತ್ತಿದೆಯೇ? ಚುನಾವಣೆಯ ವಿಷಯ ಬಂದಾಗ ಅವರು ಬಂಗಾಳವನ್ನು ವಶಪಡಿಸಿಕೊಳ್ಳುವ ಉದ್ದೇಶದಿಂದ ಇಲ್ಲಿಗೆ ಬರುತ್ತಾರೆ. ಆಮ್ಲಜನಕದ ಪೂರೈಕೆಯ ವಿಷಯ ಬಂದಾಗ ಅವರು ಅದನ್ನು ಬೇರೆ ರಾಜ್ಯಗಳಿಗೆ ತಿರುಗಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರವು 5,000 ಸಿಲಿಂಡರ್ ಆಮ್ಲಜನಕವನ್ನು ಸಂಗ್ರಹಿಸಿ ಕೋವಿಡ್ -19 ಆಸ್ಪತ್ರೆಗಳಿಗೆ ಕಳುಹಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು.ಚುನಾವಣಾ ಕಾರ್ಯಕ್ರಮಗಳಿಗೆ ಹಾಜರಾಗಲು ಹೊರಗಿನವರನ್ನು ಕರೆತರುವ ಮೂಲಕ ಬಿಜೆಪಿ ನಾಯಕರು ಕೋವಿಡ್ -19 ಅನ್ನು ರಾಜ್ಯದಲ್ಲಿ ಹರಡಿದ್ದಾರೆ ಎಂದು ಮಮತಾ ಆರೋಪಿಸಿದರು.ಇನ್ನೂ ದೇಶವನ್ನು ಈ ಬಿಜೆಪಿಯೇ ಈ ಪರಿಸ್ಥಿತಿಗೆ ತಂದಿದೆ ಎಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


