ಕೋವಿಡ್ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಹರ್ಷ ವರ್ಧನ್ ವಿಫಲ, ಕೂಡಲೇ ರಾಜೀನಾಮೆ ನೀಡಲಿ: ಚಿದಂಬರಂ ಆಗ್ರಹ
ತಜ್ಞರ ವರದಿ ಮತ್ತು ಎಚ್ಚರಿಕೆಯ ಹೊರತಾಗಿಯೂ ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ನಿಯಂತ್ರಿಸುವಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ವಿಫಲವಾಗಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಆಗ್ರಹಿಸಿದ್ದರು.

ನವದೆಹಲಿ: ತಜ್ಞರ ವರದಿ ಮತ್ತು ಎಚ್ಚರಿಕೆಯ ಹೊರತಾಗಿಯೂ ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ನಿಯಂತ್ರಿಸುವಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ವಿಫಲವಾಗಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಆಗ್ರಹಿಸಿದ್ದರು.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಚಿದಂಬರಂ ಅವರು, 'ಕೋವಿಡ್-19 ಪ್ರಕರಣಗಳ ಏರಿಕೆ ತಡೆಯಲು ಈಗ ಕೈಗೊಳ್ಳುತ್ತಿರುವ ಕ್ರಮಗಳನ್ನು ಮೊದಲೇ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ. ಸೋಂಕು ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಹರ್ಷವರ್ಧನ್ ಅವರು ವಿಫಲರಾಗಿದ್ದು, ಈ ಕೂಡಲೇ ಅವರು ರಾಜೀನಾಮೆ ನೀಡಬೇಕು' ಎಂದು ಆಗ್ರಹಿಸಿದ್ದಾರೆ.
‘2020ರ ಏಪ್ರಿಲ್ನಲ್ಲಿ ಮತ್ತು 2020ರ ಅಕ್ಟೋಬರ್-ನವೆಂಬರ್ನಲ್ಲೇ ಸಂಸದೀಯ ಸಮಿತಿ ಹಾಗೂ ತಜ್ಞರು ಎಚ್ಚರಿಕೆ ನೀಡಿದ್ದರು. ಆದರೂ ಸರ್ಕಾರ ನಿನ್ನೆಯಿಂದ ಕೈಗೊಳ್ಳುತ್ತಿರುವ ಕ್ರಮಗಳನ್ನು ಮೊದಲೇ ಕೈಗೊಂಡಿಲ್ಲವೇಕೆ. ಇದು ನಿರ್ಲಕ್ಷ್ಯವಲ್ಲವೇ? ಇದಕ್ಕೆ ಯಾರೂ ಜವಾಬ್ದಾರರಲ್ಲವೇ? ಆರೋಗ್ಯ ಸಚಿವರು ಮತ್ತು ಕಾರ್ಯದರ್ಶಿಯವರನ್ನು ರಾಜೀನಾಮೆ ನೀಡುವಂತೆ ಕೇಳಬಾರದೇಕೆ?’ ಎಂದು ಟ್ವೀಟ್ ಮಾಡಿದ್ದಾರೆ.
ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಲು ಜನ ಪರದಾಡುತ್ತಿದ್ದಾರೆ. ಸೋಂಕಿತರ ಪರೀಕ್ಷೆ ನಡೆಸುವಂತೆ ವೈದ್ಯರಲ್ಲಿ ಬೇಡಿಕೊಳ್ಳುತ್ತಿದ್ದಾರೆ. ಸೋಂಕಿತರನ್ನು ಕರೆತರುವಾಗ ಆಮ್ಲಜನಕದ ಸಿಲಿಂಡರ್ಗಳನ್ನು ತಮ್ಮ ಬೆನ್ನ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾರೆ. ಆಮ್ಲಜನಕ ಪೂರೈಸುವಂತೆ ಕೋರಿ ಆಸ್ಪತ್ರೆಗಳು ಹೈಕೋರ್ಟ್ ಮೊರೆಹೋಗುತ್ತಿವೆ. ಆರೋಗ್ಯ ಸಚಿವರೂ ಸೇರಿದಂತೆ ಆಡಳಿತದಲ್ಲಿರುವ ಯಾರಿಗೇ ಆದರೂ ಮನಃಸಾಕ್ಷಿ ಇದ್ದರೆ ಅವರು ರಾಜೀನಾಮೆ ನೀಡಬೇಕು ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


