18-45 ವಯಸ್ಸಿನವರಿಗೆ ಲಸಿಕೆ ನೀಡುವ ಮೊದಲು ಹೆಚ್ಚು ಖಾಸಗಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಮೇ 1 ರಿಂದ ಕೋವಿಡ್-19 ಲಸಿಕೆಯ ಹೊಸ ನಿಯಮಗಳು ಜಾರಿಗೆ ಬರಲಿದ್ದು, 18 ವರ್ಷದ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ. ಇದಕ್ಕೂ ಮುನ್ನ ಖಾಸಗಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ನವದೆಹಲಿ: ಮೇ 1 ರಿಂದ ಕೋವಿಡ್-19 ಲಸಿಕೆಯ ಹೊಸ ನಿಯಮಗಳು ಜಾರಿಗೆ ಬರಲಿದ್ದು, 18 ವರ್ಷದ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ. ಇದಕ್ಕೂ ಮುನ್ನ ಖಾಸಗಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ನಿಗದಿಪಡಿಸಿರುವ ವಯಸ್ಸಿನವರಿಗೆ ಆನ್ ಲೈನ್ ನೋಂದಣಿ ವ್ಯವಸ್ಥೆಯ ಮೂಲಕವೇ ಲಸಿಕೆಯನ್ನು ನೀಡಬೇಕು, ಪರಿಣಾಮಕಾರಿಯಾಗಿ ಜನಸಂದಣಿಯನ್ನು ನಿರ್ವಹಿಸುವುದಕ್ಕೆ ರಾಜ್ಯಗಳಿಗೆ ಕೇಂದ್ರ ಸೂಚನೆ ನೀಡಿದೆ.
ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹಾಗೂ ಕೋವಿಡ್-19 ನಿಯಂತ್ರಣಕ್ಕಾಗಿ ಇರುವ ತಂತ್ರಜ್ಞಾನ ಮತ್ತು ದತ್ತಾಂಶ ನಿರ್ವಹಣೆಯ ಎಂಪವರ್ಡ್ ಗ್ರೂಪ್ ನ ಅಧ್ಯಕ್ಷ ಆರ್ ಎಸ್ ಶರ್ಮಾ ರಾಜ್ಯಗಳಿಗೆ ಮೂರನೇ ಹಂತದ ಲಸಿಕೆ ಕಾರ್ಯತಂತ್ರವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗಸೂಚಿಗಳನ್ನು ಏ.24 ರಂದು ಬಿಡುಗಡೆ ಮಾಡಿದೆ.
ರಾಜ್ಯಗಳು ಖಾಸಗಿ ಆಸ್ಪತ್ರೆಗಳು, ಕೈಗಾರಿಕಾ ಸಂಸ್ಥೆಗಳ ಆಸ್ಪತ್ರೆಗಳ ಸಹಭಾಗಿತ್ವದ ಜೊತೆಗೆ ಹೆಚ್ಚುವರಿ ಖಾಸಗಿ ಕೋವಿಡ್-19 ಲಸಿಕಾ ಕೇಂದ್ರ (ಸಿವಿಸಿ)ಗಳನ್ನು ಸ್ಥಾಪಿಸಿಕೊಳ್ಳಬೇಕು ಎಂದು ಕೇಂದ್ರ ಹೇಳಿದೆ. ಖಾಸಗಿ ಆಸ್ಪತ್ರೆಗಳು ಖರೀದಿಸಿರುವ ಲಸಿಕೆಗಳು, ಕೋವಿನ್ ಪೋರ್ಟಲ್ ನಲ್ಲಿ ಆಸ್ಪತ್ರೆಗಳು ದಾಸ್ತಾನು ಹಾಗೂ ದರ, ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ ನೀಡಬೇಕು ಎಂದು ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


