ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಆರು ರೋಗಿಗಳು ಸಾವು
ಪಂಜಾಬ್ ರಾಜ್ಯದ ಅಮೃತಸರದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಮ್ಲಜನಕದ ಕೊರತೆಯಿಂದ ಆರು ಮಂದಿ ರೋಗಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಈ ಪೈಕಿ ಐವರು ಕೋವಿಡ್-19 ರೋಗಿಗಳಾಗಿದ್ದಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

ಚಂಡೀಘಡ: ಪಂಜಾಬ್ ರಾಜ್ಯದ ಅಮೃತಸರದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಮ್ಲಜನಕದ ಕೊರತೆಯಿಂದ ಆರು ಮಂದಿ ರೋಗಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಈ ಪೈಕಿ ಐವರು ಕೋವಿಡ್-19 ರೋಗಿಗಳಾಗಿದ್ದಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
ಮೃತಪಟ್ಟವರಲ್ಲಿ ಇಬ್ಬರು ಗುರುದಾಸ್ ಪುರದವರಾಗಿದ್ದು, ಒಬ್ಬರು ತರಣ್ ಟಾರ್ನ್ ಗೆ ಸೇರಿದವರಾಗಿದ್ದಾರೆ.ಇವರೆಲ್ಲರೂ ಗಂಭೀರ ಸ್ಥಿತಿಯಲ್ಲಿ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದರು.
ಆಮ್ಲಜನಕ ಪೂರೈಸುವಂತೆ ಪದೇ ಪದೇ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರೂ ಯಾರೂ ಕೂಡಾ ನೆರವು ನೀಡಲಿಲ್ಲ ಎಂದು ನೀಲ್ ಕಾಂತ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಸುನೀಲ್ ದೇವ್ ಗನ್ ಹೇಳಿದ್ದಾರೆ.
ಆಮ್ಲಜನಕ ಕೊರತೆಯಿಂದ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ರೋಗಿಗಳು ಸಾವನ್ನಪ್ಪಿದ್ದ ನಂತರ ಐದು ಆಕ್ಸಿಜನ್ ಸಿಲಿಂಡರ್ ಗಳನ್ನು ಆಸ್ಪತ್ರೆಗೆ ಪೂರೈಸಲಾಗಿದೆ ಎಂದು ದೇವಗನ್ ತಿಳಿಸಿದ್ದಾರೆ.
ಆಮ್ಲಜನಕ ಪೂರೈಕೆಯ ವಿಷಯದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮೂರು ಪ್ರಮುಖ ಆಮ್ಲಜನಕ ಪೂರೈಕೆದಾರರು ಹೇಳಿದ್ದಾರೆ.ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ತಡೆಗಟ್ಟಲು ಆಮ್ಲಜನಕ ಘಟಕಗಳ ಹೊರಗೆ ಭಾರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ ಎಂದು ದೇವಗನ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


