ದೆಹಲಿ ಕೋವಿಡ್ ಬಿಕ್ಕಟ್ಟು: ಸಂಸತ್ ಸಿಬ್ಬಂದಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚನೆ
ದೆಹಲಿಯಲ್ಲಿ ಕೊರೋನಾ ಹೆಚ್ಚು ಉಲ್ಬಣಗೊಂಡ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿಗೆ ಬೀಗ ಹಾಕಿರುವ ಮಧ್ಯೆಯೇ ಸಂಸತ್ತಿನ ಎಲ್ಲಾ ಸಿಬ್ಬಂದಿಗೆ ಮನೆಯಿಂದ ಕೆಲಸ ಮಾಡುವಂತೆ...

ನವದೆಹಲಿ: ದೆಹಲಿಯಲ್ಲಿ ಕೊರೋನಾ ಹೆಚ್ಚು ಉಲ್ಬಣಗೊಂಡ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿಗೆ ಬೀಗ ಹಾಕಿರುವ ಮಧ್ಯೆಯೇ ಸಂಸತ್ತಿನ ಎಲ್ಲಾ ಸಿಬ್ಬಂದಿಗೆ ಮನೆಯಿಂದ ಕೆಲಸ ಮಾಡುವಂತೆ ಲೋಕಸಭಾ ಸಚಿವಾಲಯ ಭಾನುವಾರ ಆದೇಶ ಹೊರಡಿಸಿದೆ.
ರಾಜ್ಯಸಭಾ ಸಚಿವಾಲಯವು ಕೆಲವು ದಿನಗಳ ಹಿಂದೆ ತನ್ನ ನೌಕರರಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿತ್ತು. ಇದೀಗ ಲೋಕಸಭೆ ಸಚಿವಾಲಯ ಸಹ ತನ್ನ ಸಿಬ್ಬಂದಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚಿಸಿದೆ.
ಸಂಸತ್ತಿನಲ್ಲಿ ಕೆಲಸ ಮಾಡುವ ಎಲ್ಲ ನೌಕರರು ಈಗ ಆದೇಶದ ಪ್ರಕಾರ ಮನೆಯಿಂದ ಕೆಲಸದ ಅವಶ್ಯಕತೆಗಳಿಗೆ ಒಳಪಟ್ಟಿರುತ್ತಾರೆ.
ಕೊರೋನಾ ಪ್ರಕರಣಗಳು ಮುಂದುವರಿದ ಹಿನ್ನೆಲೆಯಲ್ಲಿ ಮತ್ತು ದೆಹಲಿಯಲ್ಲಿ ಲಾಕ್ ಡೌನ್ ವಿಸ್ತರಣೆಯಾಗಿರುವುದನ್ನು ಗಣನೆಗೆ ತೆಗೆದುಕೊಂಡು, ಲೋಕಸಭಾ ಸಚಿವಾಲಯದ ಎಲ್ಲಾ ವರ್ಗದ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ಲೋಕಸಭಾ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


