ದೇಶ

ಪಶ್ಚಿಮ ಬಂಗಾಳ ಚುನಾವಣೆ 7ನೇ ಹಂತ: ಬೆಳಗ್ಗೆ 9.30ರ ಹೊತ್ತಿಗೆ ಶೇ.17.47ರಷ್ಟು ಮತದಾನ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ 7ನೇ ಹಂತದ ಮತದಾನ ಚಾಲ್ತಿಯಲ್ಲಿದ್ದು, ಬೆಳಗ್ಗೆ 9.32ರ ಹೊತ್ತಿಗೆ ಶೇ.17.47ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳ ಚುನಾವಣೆ 7ನೇ ಹಂತ: ಬೆಳಗ್ಗೆ 9.30ರ ಹೊತ್ತಿಗೆ ಶೇ.17.47ರಷ್ಟು ಮತದಾನ
ಮುರ್ಷಿದಾಬಾದ್ ನಲ್ಲಿ ಮತದಾನ
Published On :

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ 7ನೇ ಹಂತದ ಮತದಾನ ಚಾಲ್ತಿಯಲ್ಲಿದ್ದು, ಬೆಳಗ್ಗೆ 9.32ರ ಹೊತ್ತಿಗೆ ಶೇ.17.47ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ದೇಶದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆಯೇ, ಪಶ್ಚಿಮ ಬಂಗಾಳದ 5 ಜಿಲ್ಲೆಗಳ 34 ಕ್ಷೇತ್ರಗಳಲ್ಲಿ 7ನೇ ಹಂತದ ವಿಧಾನಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಏಳನೇ ಹಂತವು ದಕ್ಷಿಣ ದಿನಾಜ್‌ಪುರದ ಆರು, ಮಾಲ್ಡಾದಲ್ಲಿ ಆರು, ಮುರ್ಷಿದಾಬಾದ್‌ನಲ್ಲಿ ಒಂಬತ್ತು, ಪಶ್ಚಿಮ  ಬರ್ಧಮಾನ್‌ನಲ್ಲಿ ಒಂಭತ್ತು ಮತ್ತು ಕೋಲ್ಕತ್ತಾದ ನಾಲ್ಕು ಕ್ಷೇತ್ರಗಳಲ್ಲಿ ಮತದಾನ ಭರದಿಂದ ನಡೆಯುತ್ತಿದೆ.

ಏಳನೇ ಹಂತದ ಮತದಾನದಲ್ಲಿ ಸಿಲ್ಗುರಿ ಕ್ಷೇತ್ರದಿಂದ ಸಿಪಿಐ(ಎಂ)ನ ಅಶೋಕ್ ಭಟ್ಟಾಚಾರ್ಯ ಬಿಜೆಪಿ ಅಭ್ಯರ್ಥಿ ಶಂಕರ್ ಘೋಷ್ ಮತ್ತು ಟಿಎಂಸಿಯ ಒಂಪ್ರಕಾಶ್ ಮಿಶ್ರಾ ವಿರುದ್ಧ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಸಿಲಿಗುರಿಯ ಮಾಜಿ ಮೇಯರ್ ಭಟ್ಟಾಚಾರ್ಯ ಅವರು ಉತ್ತರ ಬಂಗಾಳದ ಪ್ರಮುಖ ಕಮ್ಯುನಿಸ್ಟ್  ನಾಯಕರಾಗಿದ್ದಾರೆ. ಟಿಎಂಸಿಯ ಹಿರಿಯ ಮುಖಂಡ ಮತ್ತು ರಾಜ್ಯ ಸರ್ಕಾರದ ಸಚಿವ ಬ್ರಾತ್ಯ ಬಸು ಅವರು ದಮ್ ದಮ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ಸಿಪಿಐ(ಎಂ) ಪಲಾಶ್ ದಾಸ್ ಅವರನ್ನು ಮತ್ತು ಬಿಜೆಪಿ ಬಿಮಲ್ ಶಂಕರ್ ನಂದಾ ಅವರನ್ನು ಆ ಕ್ಷೇತ್ರದಿಂದ ಕಣಕ್ಕಿಳಿಸಿದೆ. ನಟ ಚಿರಂಜೀತ್ ಚಕ್ರವರ್ತಿ ಅವರು  ಟಿಎಂಸಿ ಅಭ್ಯರ್ಥಿಯಾಗಿ ಬಾರಾಸತ್‌ನಿಂದ ಬಿಜೆಪಿ ಅಭ್ಯರ್ಥಿ ಶಂಕರ್ ಚಟರ್ಜಿ ಮತ್ತು ಫಾರ್ವರ್ಡ್ ಬ್ಲಾಕ್ ಅಭ್ಯರ್ಥಿ ಸಂಜಿಬ್ ಚಟ್ಟೋಪಾಧ್ಯಾಯ ವಿರುದ್ಧ ಸ್ಪರ್ಧಿಸಿದ್ದಾರೆ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.