ದೇಶದಲ್ಲಿ ಮತ್ತೆ 3.52 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ಪತ್ತೆ, 2812 ಮಂದಿ ಸಾವು
ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ 3.5 ಲಕ್ಷ ದಾಟಿದ್ದು, 2812 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ 3.5 ಲಕ್ಷ ದಾಟಿದ್ದು, 2812 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 3,52,991 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 2812 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 2,19,272 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಚೇತರಿಕೆಯಾದವರ ಸಂಖ್ಯೆ 1,43,04,382ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2812 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,95,123 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 28,13,658 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 14,02,367 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ 27,93,21,177 ಕೋವಿಡ್ ಪರೀಕ್ಷೆಗಳನ್ನು ನಡೆಸಿದಂತಾಗಿದೆ. ಅಂತೆಯೇ ದೇಶದಲ್ಲಿ ಈ ವರೆಗೂ 14,19,11,223 ಡೋಸ್ ಲಸಿಕೆ ನೀಡಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


