ಹೈಕೋರ್ಟ್ ತರಾಟೆ ನಂತರ, ನ್ಯಾಯಾಧೀಶರಿಗಾಗಿ ಅಶೋಕ ಹೋಟೆಲ್‌ನಲ್ಲಿ ಕೋವಿಡ್ ಸೌಲಭ್ಯ ಆದೇಶ ಹಿಂಪಡೆದ ಕೇಜ್ರಿವಾಲ್ ಸರ್ಕಾರ
ದೆಹಲಿ ಹೈಕೋರ್ಟ್ ನ್ಯಾಯಾಧೀಶರು, ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಪಂಚತಾರಾ ಹೋಟೆಲ್‌ನಲ್ಲಿ 100 ಕೋಣೆಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವ ಆಡಳಿತಾತ್ಮಕ ಆದೇಶವನ್ನು ಹಿಂಪಡೆಯಲು ದೆಹಲಿ ಸರ್ಕಾರ ಮಂಗಳವಾರ ನಿರ್ದೇಶನ ನೀಡಿದೆ.

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಾಧೀಶರು, ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಪಂಚತಾರಾ ಹೋಟೆಲ್‌ನಲ್ಲಿ 100 ಕೋಣೆಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವ ಆಡಳಿತಾತ್ಮಕ ಆದೇಶವನ್ನು ಹಿಂಪಡೆಯಲು ದೆಹಲಿ ಸರ್ಕಾರ ಮಂಗಳವಾರ ನಿರ್ದೇಶನ ನೀಡಿದೆ.
ಅಂತಹ ಸೌಲಭ್ಯ ನೀಡುವಂತೆ ನಾವು ಯಾವುದೇ ಮನವಿ ಮಾಡಿಲ್ಲ ಎಂದು ನ್ಯಾಯಪೀಠ ತರಾಟೆಗೆ ತೆಗೆದುಕೊಂಡ ನಂತರ ದೆಹಲಿ ಸರ್ಕಾರ ತನ್ನ ಆದೇಶವನ್ನು ಹಿಂಪಡೆದಿದೆ.
ಅಶೋಕ ಹೋಟೆಲ್‌ನಲ್ಲಿ ನ್ಯಾಯಾಧೀಶರಿಗಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವ ಆದೇಶವನ್ನು ಹಿಂಪಡೆಯಲು ನಿರ್ದೇಶನ ನೀಡಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಡರಾತ್ರಿ ಟ್ವೀಟ್ ಮಾಡಿದ್ದಾರೆ.
ಏಪ್ರಿಲ್ 25 ರಂದು ಚಾಣಕ್ಯಪುರಿ ಉಪವಿಭಾಗ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶದಲ್ಲಿ, ದೆಹಲಿ ಹೈಕೋರ್ಟ್‌ನ ಕೋರಿಕೆಯ ಮೇರೆಗೆ ಅಶೋಕ ಹೋಟೆಲ್‌ನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗುತ್ತಿದೆ ಎಂದು ಹೇಳಲಾಗಿತ್ತು.
ಈ ಕುರಿತ ಮಾಧ್ಯಮ ವರದಿ ಆಧರಿಸಿ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ತನ್ನ ನ್ಯಾಯಾಧೀಶರು, ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಪಂಚತಾರಾ ಅಶೋಕ ಹೋಟೆಲ್‌ನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಯಾವುದೇ ವಿನಂತಿಯನ್ನು ಮಾಡಿಲ್ಲ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


