ದೇಶ

ಪತ್ರಕರ್ತ ತರುಣ್ ತೇಜ್'ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 12ಕ್ಕೆ ತೀರ್ಪು ಪ್ರಕಟ

‘ತೆಹೆಲ್ಕಾ’ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್‌ ತೇಜ್‌ಪಾಲ್‌ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಪನ್ನು ಮೇ 12ರಂದು ಪ್ರಕಟಿಸಲಾಗುತ್ತದೆ ಎಂದು ಗೋವಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ಹೇಳಿದೆ.

ಪತ್ರಕರ್ತ ತರುಣ್ ತೇಜ್'ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 12ಕ್ಕೆ ತೀರ್ಪು ಪ್ರಕಟ
ತರುಣ್ ತೇಜ್'ಪಾಲ್
Published On :

ಪಣಜಿ: ‘ತೆಹೆಲ್ಕಾ’ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್‌ ತೇಜ್‌ಪಾಲ್‌ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಪನ್ನು ಮೇ 12ರಂದು ಪ್ರಕಟಿಸಲಾಗುತ್ತದೆ ಎಂದು ಗೋವಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ಹೇಳಿದೆ.

ಈ ಮೊದಲು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಬೇಕಿತ್ತು. ಆದರೆ, ನ್ಯಾಯಾಧೀಶೆ ಕ್ಷಮಾ ಜೋಶಿ ಅವರು ತೀರ್ಪನ್ನು ಮೇ 12 ಕ್ಕೆ ಪ್ರಕಟಿಸುವುದಾಗಿ ಹೇಳಿದ್ದಾರೆ. 

ಸರ್ಕಾರದ ಪರ ವಕೀಲ ಫ್ರಾನ್ಸಿಸ್ಕೊ ಟವರೆಸ್‌ ಪ್ರತಿಕ್ರಿಯೆ ನೀಡಿ, ‘ಯಾವ ಕಾರಣವನ್ನೂ ನೀಡದೇ ನ್ಯಾಯಾಧೀಶರು ತೀರ್ಪನ್ನು ಮುಂದೂಡಿದ್ದಾರೆ‘ ಎಂದು ತಿಳಿಸಿದ್ದಾರೆ.

ತೆಹಲ್ಕಾದ ಸಂಸ್ಥಾಪಕ -ಸಂಪಾದಕ ತರುಣ್ ತೇಜ್‌ಪಾಲ್ 2013 ನವೆಂಬರ್ ತಿಂಗಳಿನಲ್ಲಿ ಥಿಂಕ್ ಫೆಸ್ಟ್ ಕಾರ್ಯಕ್ರಮದ ವೇಳೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಅದೇ ಸಂಸ್ಥೆಯ ಕಿರಿಯ ಸಹೋದ್ಯೋಗಿಯೊಬ್ಬರು ಆರೋಪಿಸಿದ್ದರು. ಪಂಚತಾರಾ ಹೋಟೆಲ್‌ನ ಲಿಫ್ಟ್‌ನಲ್ಲಿ ತರುಣ್ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಸಂತ್ರಸ್ತೆ ದೂರು ನೀಡಿದ್ದರು.

2013ರಲ್ಲಿ ತರುಣ್ ತೇಜ್‌ಪಾಲ್‌ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ಕಳೆದ ಮಾರ್ಚ್‌ನಲ್ಲಿ ಮುಕ್ತಾಯಗೊಂಡಿದ್ದು, ತೀರ್ಪನ್ನು ಏಪ್ರಿಲ್‌ 27ಕ್ಕೆ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.