ದೇಶ

ಹತೋಟಿಗೆ ಬಾರದ ಕೋವಿಡ್ ಸಾಂಕ್ರಾಮಿಕ: ಮಹಾರಾಷ್ಟ್ರದಲ್ಲಿ ಮತ್ತೆ 15 ದಿನಗಳವರೆಗೆ ಲಾಕ್ ಡೌನ್ ನಿರ್ಬಂಧ ವಿಸ್ತರಣೆ

ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ಸೋಂಕು ಸಾಂಕ್ರಾಮಿಕ ಹತೋಟಿಗೆ ಬಾರದ ಹಿನ್ನಲೆಯಲ್ಲಿ ಮತ್ತೆ 15 ದಿನಗಳ ಕಾಲ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.

ಹತೋಟಿಗೆ ಬಾರದ ಕೋವಿಡ್ ಸಾಂಕ್ರಾಮಿಕ: ಮಹಾರಾಷ್ಟ್ರದಲ್ಲಿ ಮತ್ತೆ 15 ದಿನಗಳವರೆಗೆ ಲಾಕ್ ಡೌನ್ ನಿರ್ಬಂಧ ವಿಸ್ತರಣೆ
ಮಹಾರಾಷ್ಟ್ರ ಲಾಕ್ಡೌನ್
Published On :

ಮುಂಬೈ: ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ಸೋಂಕು ಸಾಂಕ್ರಾಮಿಕ ಹತೋಟಿಗೆ ಬಾರದ ಹಿನ್ನಲೆಯಲ್ಲಿ ಮತ್ತೆ 15 ದಿನಗಳ ಕಾಲ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.

ಈ ಬಗ್ಗೆ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಮಾಹಿತಿ ನೀಡಿದ್ದು, ಮತ್ತೆ 15 ದಿನಗಳ ಕಾಲ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ. ಈ ಹಿಂದೆ ಏಪ್ರಿಲ್ 4 ರಂದು ವಿಧಿಸಲಾಗಿದ್ದ ಹಿಂದಿನ ಲಾಕ್‌ಡೌನ್ ಏಪ್ರಿಲ್ 30 ಕ್ಕೆ ಕೊನೆಗೊಳ್ಳಲಿದೆ. ಹೀಗಾಗಿ ಮತ್ತೆ 15  ದಿನಗಳ ಕಾಲ ನಿರ್ಬಂಧಗಳನ್ನು ಮುಂದುವರೆಸಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕುಗಳ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಸಚಿವರು ಮನವಿ  ಮಾಡಿದ್ದರು ಎನ್ನಲಾಗಿದೆ.  

ಕೊರೋನವೈರಸ್ ಸೋಂಕಿನಲ್ಲಿ ಭಾರಿ ಏರಿಕೆಯ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಏಪ್ರಿಲ್ 4 ರಂದು ವಾರಾಂತ್ಯದ ಲಾಕ್‌ಡೌನ್ ಘೋಷಿಸಿತ್ತು ಮತ್ತು ವಾರದ ದಿನಗಳಲ್ಲಿ ಏಪ್ರಿಲ್ 30 ರವರೆಗೆ ಜನರ ಸಂಚಾರಕ್ಕೆ ಕಡಿವಾಣ ಹಾಕಿತ್ತು. ಖಾಸಗಿ ಕಚೇರಿಗಳು, ಚಿತ್ರಮಂದಿರಗಳಿಗೆ ಸರ್ಕಾರ ನಿರ್ಬಂಧ ವಿಧಿಸಿತ್ತು.  ಪ್ರಸ್ತುತ, ಶುಕ್ರವಾರ ರಾತ್ರಿ 8 ರಿಂದ ಸೋಮವಾರದಂದು ಬೆಳಿಗ್ಗೆ 7 ಗಂಟೆಯವರೆಗೂ ವಾರಾಂತ್ಯದ ಲಾಕ್ಡೌನ್ ಜಾರಿಯಲ್ಲಿರುತ್ತದೆ ಎಂದು ಟೋಪೆ ಮಾಹಿತಿ ನೀಡಿದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.