18-44 ವಯಸ್ಸಿನವರಿಗೆ ದೆಹಲಿಯಲ್ಲಿ ಲಸಿಕೆ ದಾಸ್ತಾನು ಇಲ್ಲ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್
18-44 ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ದೆಹಲಿಯಲ್ಲಿ ಲಸಿಕೆ ಲಭ್ಯತೆ ಇಲ್ಲ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ.

ನವದೆಹಲಿ: 18-44 ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ದೆಹಲಿಯಲ್ಲಿ ಲಸಿಕೆ ಲಭ್ಯತೆ ಇಲ್ಲ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. ಲಸಿಕೆ ಪಡೆಯಲು ಈಗಾಗಲೇ ಉತ್ಪಾದಕರಿಗೆ ಆರ್ಡರ್ ಗಳನ್ನು ಕಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
"ಈ ವಯಸ್ಸಿನ ವಿಭಾಗದವರಿಗೆ ಲಸಿಕೆ ನೀಡುವುದಕ್ಕೆ ಅಗತ್ಯ ತಯಾರಿಯನ್ನು ಮಾಡಿಕೊಳ್ಳಲಾಗಿದೆ. ತಕ್ಷಣಕ್ಕೆ ನಮ್ಮ ಬಳಿ ಲಸಿಕೆಗಳಿಲ್ಲ. ಲಸಿಕೆ ಪೂರೈಕೆ ಮಾಡುವಂತೆ ಕಂಪನಿಗಳಿಗೆ ಮನವಿ ಮಾಡಿದ್ದೇವೆ" ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ದೆಹಲಿ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.
ದೆಹಲಿಯಲ್ಲಿ 18 ರ ಮೇಲ್ಪಟ್ಟ ಎಲ್ಲರಿಗೂ ಕೋವಿಡ್-19 ಲಸಿಕೆಯನ್ನು ಉಚಿತವಾಗಿ ನೀಡುವುದಕ್ಕೆ ಸರ್ಕಾರ ನಿರ್ಧರಿಸಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗಾಗಲೇ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


