ದೇಶ

ಕೇರಳ: ಚುನಾವಣೆ ಫಲಿತಾಂಶ ಬರುವುದಕ್ಕೂ 2 ದಿನಗಳ ಮುನ್ನ ಯುಡಿಎಫ್ ಅಭ್ಯರ್ಥಿ ವಿವಿ ಪ್ರಕಾಶ್ ನಿಧನ

ಕೇರಳದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುವುದಕ್ಕೂ ಎರಡು ದಿನಗಳ ಮುನ್ನ ಯುಡಿಎಫ್ ಅಭ್ಯರ್ಥಿಯೊಬ್ಬರು ಮೃತಪಟ್ಟಿದ್ದಾರೆ.

ಕೇರಳ: ಚುನಾವಣೆ ಫಲಿತಾಂಶ ಬರುವುದಕ್ಕೂ 2 ದಿನಗಳ ಮುನ್ನ ಯುಡಿಎಫ್ ಅಭ್ಯರ್ಥಿ ವಿವಿ ಪ್ರಕಾಶ್ ನಿಧನ
ಫಲಿತಾಂಶ ಬರುವುದಕ್ಕೂ 2 ದಿನಗಳ ಮುನ್ನ ಯುಡಿಎಫ್ ಅಭ್ಯರ್ಥಿ ವಿವಿ ಪ್ರಕಾಶ್
Published On :

ಮಳಪ್ಪುರಂ: ಕೇರಳದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುವುದಕ್ಕೂ ಎರಡು ದಿನಗಳ ಮುನ್ನ ಯುಡಿಎಫ್ ಅಭ್ಯರ್ಥಿಯೊಬ್ಬರು ಮೃತಪಟ್ಟಿದ್ದಾರೆ. 

ನೀಲಾಂಬುರ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿವಿ ಪ್ರಕಾಶ್ (56) ಮಳಪ್ಪುರಂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರೂ ಆಗಿದ್ದರು. 

ಗುರುವಾರ ಮುಂಜಾನೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ನಿಲಾಂಬುರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಈ ಹಿಂದೆಯೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಕಾಶ್ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದರು. ಪ್ರಕಾಶ್ ನಿಧನಕ್ಕೆ ವಿಪಕ್ಷ ನಾಯಕ ರಮೇಶ್ ಚೆನ್ನಿತಲ ಸಂತಾಪ ಸೂಚಿಸಿದ್ದಾರೆ. "ಪ್ರಕಾಶ್ ಅವರ ನಿಧನದಿಂದ ದುಃಖವಾಗಿದೆ, ಅವರು ನೀಲಾಂಬುರ್ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸ ಹೊಂದಿದ್ದರು" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.