ಸೋಲಿ ಸೊರಾಬ್ಜಿ ನಿಧನ: ರಾಷ್ಟ್ರಪತಿ, ಪ್ರಧಾನಿ ಮೋದಿ, ಸಂತಾಪ; ಮಾಜಿ ಅಟಾರ್ನಿ ಜನರಲ್ ನೆನೆದ ಸುಪ್ರೀಂ ಕೋರ್ಟ್
ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.
ಶುಕ್ರವಾರ ನಿಧನರಾದ ಮಾಜಿ ಅಟಾರ್ನಿ ಜನರಲ್ ಅವರು ಕೋವಿಡ್ -19 ಸೋಂಕಿಗೆ ಒಳಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. . ಅವರು 1989-90ರವರೆಗೆ ಮತ್ತು 1998-2004ರವರೆಗೆ ಭಾರತದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.
"ಅತ್ಯುತ್ತಮ ವಕೀಲ, ಬಡವರಿಗೆ ಮತ್ತು ದೀನ ದಲಿತರಿಗೆ ಕಾನೂನಿನ ಮೂಲಕ ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಸೋಲಿ ಸೊರಾಬ್ಜಿ ಒಬ್ಬ ಬುದ್ದಿಜೀವಿ. ಅವರು ಭಾರತದ ಅಟಾರ್ನಿ ಜನರಲ್ ಆಗಿದ್ದಾಗಿನ ಅವರ ಸೇವೆ ಸ್ಮರಣೀಯ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನಾನು ಸಂತಾಪ ಸೂಚಿಸುತ್ತೇನೆ." ಪ್ರಧಾನಿ ನರೇಂದ್ತ ಮೋದಿ ಹೇಳಿದ್ದಾರೆ.
"ಸೋಲಿ ಸೊರಾಬ್ಜಿ ನಿಧನದಿಂದ ನಾವು ಭಾರತದ ಕಾನೂನು ವ್ಯವಸ್ಥೆಯ ಐಕಾನ್ ಅನ್ನು ಕಳೆದುಕೊಂಡಿದ್ದೇವೆ. ಸಾಂವಿಧಾನಿಕ ಕಾನೂನು ಮತ್ತು ನ್ಯಾಯ ವ್ಯವಸ್ಥೆಯ ವಿಕಾಸವನ್ನು ಆಳವಾಗಿ ಪ್ರಭಾವಿಸಿದ ಆಯ್ದ ಕೆಲವರಲ್ಲಿ ಅವರೂ ಒಬ್ಬರಾಗಿದ್ದಾರೆ. ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದ ಸೊರಾಬ್ಜಿ ಅತ್ಯಂತ ಶ್ರೇಷ್ಠ ನ್ಯಾಯಶಾಸ್ತ್ರಜ್ಞರಲ್ಲಿ ಒಬ್ಬರಾಗಿದ್ದರು. ಅವರನ್ನು ಕಳೆದುಕೊಂಡ ಅವರ ಕುಟುಂಬಕ್ಕೆ. ಸಹವರ್ತಿಗಳಿಗೆ ನನ್ನ ಸಂತಾಪವಿದೆ." ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ನಲ್ಲಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಸಂತಾಪ
ಮಾಜಿ ಅಟಾರ್ನಿ ಜನರಲ್ ಮತ್ತು ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ಅವರ ನಿಧನಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸಂತಾಪ ಸೂಚಿಸಿ ಗೌರವ ಸಲ್ಲಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ದಿನದ ನ್ಯಾಯಾಲಯದ ವಿಚಾರಣೆಯನ್ನು ಪ್ರಾರಂಭಿಸುವ ಮುನ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎ.ಎಸ್.ಬೋಪಣ್ಣ ಅವರ ನ್ಯಾಯಪೀಠ, "ಮಾನವ ಹಕ್ಕುಗಳ ಹೋರಾಟಗಾರ ಸೋಲಿ ಸೊರಾಬ್ಜಿ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ ಎಂಬುದು ಬಹಳ ದುಃಖದ ಸುದ್ದಿ. ನಾವು ಅವರ ಆತ್ಮಕ್ಕೆ ಶಾಂತಿ ಲಭಿಸಲೆಂದು ಪ್ರಾರ್ಥಿಸುತ್ತೇವೆ." ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


