ಮಣಿಪುರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಗೋವಿಂದಾಸ್ ಕೊಂತೌಜಮ್ ಬಿಜೆಪಿ ಸೇರ್ಪಡೆ
ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಉಳಿದಿರುವ ಹೊತ್ತಿನಲ್ಲಿ ಮಣಿಪುರ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಗೋವಿಂದಾಸ್ ಕೊಂತೌಜಮ್ ಭಾನುವಾರ ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡಿದ್ದಾರೆ.

ನವದೆಹಲಿ: ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಉಳಿದಿರುವ ಹೊತ್ತಿನಲ್ಲಿ ಮಣಿಪುರ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಗೋವಿಂದಾಸ್ ಕೊಂತೌಜಮ್ ಭಾನುವಾರ ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡಿದ್ದಾರೆ.
ಮಣಿಪುರ ಮುಖ್ಯಮಂತ್ರಿ ಎನ್ ಬಿರೆನ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಮತ್ತು ಬಿಜೆಪಿ ಹಿರಿಯ ನಾಯಕ ಸಂಬಿತ್ ಪಾತ್ರ ಸಮ್ಮುಖದಲ್ಲಿ ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಬಳಿಕ ದೆಹಲಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಣಿಪುರ ಸಿಎಂ ಎನ್ ಬಿರೆನ್ ಸಿಂಗ್, ಈಶಾನ್ಯ ಭಾರತದ ಏಳಿಗೆಗೆ ಪ್ರಧಾನಿ ಮೋದಿ ಕಾಳಜಿ ವಹಿಸಿದ್ದಾರೆ. ಇತ್ತೀಚೆಗೆ ಕೇಂದ್ರ ಸಂಪುಟಕ್ಕೆ ಇಲ್ಲಿನ ಐವರು ನಾಯಕರನ್ನು ಸೇರ್ಪಡೆ ಮಾಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಂಪುಟದಲ್ಲಿ ಮಣಿಪುರ ಅಭಿವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ ಎಂದಿದ್ದಾರೆ.
ಕಳೆದ ಜುಲೈ 28ರಂದು, 26 ಬುಶ್ನುಪುರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಗೋವಿಂದಾಸ್ ಕೊಂತೌಜಮ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವಿಧಾನಸಭೆಯ ಕಾರ್ಯದರ್ಶಿ ಕಾರ್ಯಾಲಯಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಅವರು ಕಳುಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


