ದೇಶ

ಪೆಗಾಸಸ್ ವಿವಾದ: ದಿಕ್ಕು ಬದಲಿಸಿದ ವಿಪಕ್ಷಗಳು, ಸಂಸತ್ತು ಬದಲು ಸುಪ್ರೀಂಕೋರ್ಟ್'ನಲ್ಲಿ ದನಿ ಎತ್ತಲು ನಿರ್ಧಾರ?

ಪೆಗಾಸಸ್ ಗೂಢಚರ್ಯೆ ಹಗರಣ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಷ್ಟೂ ದಿನ ಸಂಸತ್ತಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿದ್ದ ವಿರೋಧ ಪಕ್ಷಗಳು ಇದೀಗ ಸುಪ್ರೀಂಕೋರ್ಟ್ ನಲ್ಲಿ ದನಿ ಎತ್ತಲು ನಿರ್ಧರಿಸಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪೆಗಾಸಸ್ ವಿವಾದ: ದಿಕ್ಕು ಬದಲಿಸಿದ ವಿಪಕ್ಷಗಳು, ಸಂಸತ್ತು ಬದಲು ಸುಪ್ರೀಂಕೋರ್ಟ್'ನಲ್ಲಿ ದನಿ ಎತ್ತಲು ನಿರ್ಧಾರ?
ಸಂಗ್ರಹ ಚಿತ್ರ
Published On :

ನವದೆಹಲಿ: ಪೆಗಾಸಸ್ ಗೂಢಚರ್ಯೆ ಹಗರಣ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಷ್ಟೂ ದಿನ ಸಂಸತ್ತಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿದ್ದ ವಿರೋಧ ಪಕ್ಷಗಳು ಇದೀಗ ಸುಪ್ರೀಂಕೋರ್ಟ್ ನಲ್ಲಿ ದನಿ ಎತ್ತಲು ನಿರ್ಧರಿಸಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಪೆಗಾಗಸ್ ವಿವಾರ ದೇಶದ ಭದ್ರತೆಗೆ ಸಂಬಂಧಿಸಿದ ವಿಚಾರವಾಗಿದೆ. ಈ ವಿಚಾರ ಸಂಬಂಧ ನ್ಯಾಯಯುತ ತನಿಖೆ ನಡೆಯುವ ಅಗತ್ಯವಿದ್ದು, ಹೀಗಾಗಿ ವಿರೋಧ ಪಕ್ಷಗಳು ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ. 

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕೇಂದ್ರ ಸರ್ಕಾರ ಪೆಗಾಸಸ್ ವಿವಾದ ಸಂಬಂಧ ವಿರೋಧ ಪಕ್ಷಗಳು ಪದೇ ಪದೇ ಸಂಸತ್ತು ಕಲಾಪಕ್ಕೆ ಅಡ್ಡಿಯುಂಟು ಮಾಡಿದ್ದರಿಂದ ರೂ.130 ಕೋಟಿಗೂ ಹೆಚ್ಚು ತೆರಿಗೆದಾರರ ಹಣ ವ್ಯರ್ಥವಾಗಿದೆ ಎಂದು ಹೇಳಿತ್ತು. 

ಇದರ ಬೆನ್ನಲ್ಲೇ ಇದೀಗ ತಮ್ಮ ದಿಕ್ಕನ್ನು ಬದಲಿಸಿರುವ ವಿರೋಧ ಪಕ್ಷಗಳು ಸಂಸತ್ತು ಬದಲು ಸುಪ್ರೀಂಕೋರ್ಟ್ ನಲ್ಲಿ ದನಿ ಎತ್ತಲು ನಿರ್ಧರಿಸಿವೆ ಎಂದು ವರದಿಗಳು ತಿಳಿಸಿವೆ. 

ಇದರಂತೆ ಮುಂದಿನ ವಾರದಿಂದ ವಿರೋಧ ಪಕ್ಷಗಳ ನಾಯಕರು ಸಂಸತ್ತಿನಲ್ಲಿ ತೈಲ ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ವಿಫಲಗೊಂಡಿರುವ ವಿಚಾರ ಕುರಿತು ಧ್ವನಿ ಎತ್ತಲಿದ್ದಾರೆಂದು ಮೂಲಗಳು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.