ಬಾಕಿ ಇರುವ ವಿವಾದ ತ್ವರಿತವಾಗಿ ಬಗೆಹರಿಸಿಕೊಳ್ಳಲಿ ಚೀನಾ-ಭಾರತ ಒಪ್ಪಿಗೆ: ಜಂಟಿ ಹೇಳಿಕೆ
ಈಶಾನ್ಯ ಲಡಾಖ್ ನಲ್ಲಿ ಉಭಯ ದೇಶಗಳ ನಡುವೆ ಇರುವ ವಿವಾದಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳುವುದಕ್ಕೆ ಭಾರತ-ಚೀನಾ ಸೇನೆಗಳು ಒಪ್ಪಿಗೆ ಸೂಚಿಸಿವೆ.

ನವದೆಹಲಿ: ಈಶಾನ್ಯ ಲಡಾಖ್ ನಲ್ಲಿ ಉಭಯ ದೇಶಗಳ ನಡುವೆ ಇರುವ ವಿವಾದಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳುವುದಕ್ಕೆ ಭಾರತ-ಚೀನಾ ಸೇನೆಗಳು ಒಪ್ಪಿಗೆ ಸೂಚಿಸಿವೆ.
12 ನೇ ಸುತ್ತಿನ ಮಾತುಕತೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮಾತುಕತೆ ರಚನಾತ್ಮಕವಾಗಿತ್ತು ಎಂದು ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಸೇನೆಯ ನಡುವೆ ಮಾತುಕತೆ ನಡೆದ ಎರಡು ದಿನಗಳ ಬಳಿಕ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಎಲ್ಎಸಿಯಾದ್ಯಂತ ಸೇನಾ ಹಿಂತೆಗೆತಕ್ಕೆ ಸಂಬಂಧಿಸಿದಂತೆ ಪ್ರಾಮಾಣಿಕ ಮತ್ತು ಆಳವಾದ ವಿಷಯ ವಿನಿಮಯ ದ್ವಿಪಕ್ಷೀಯ ಸಭೆಯಲ್ಲಿ ಆಗಿದೆ ಎಂದು ಹೇಳಿದೆ. "ಈ ಸುತ್ತಿನ ಮಾತುಕತೆ ರಚನಾತ್ಮಕವಾಗಿದ್ದು, ಈಗಿರುವ ಒಪ್ಪಂದ, ಶಿಷ್ಟಾಚಾರಗಳ ಅಡಿಯಲ್ಲಿ ಬಾಕಿ ಇರುವ ವಿಷಯಗಳನ್ನು ಇತ್ಯರ್ಥಗೊಳಿಸಿಕೊಳ್ಳಲು ಹಾಗೂ ಮಾತುಕತೆ ಮುಂದುವರೆಸಲು ನಿರ್ಧರಿಸಲಾಗಿದೆ" ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


