ಪ್ರಧಾನಿ ನರೇಂದ್ರ ಮೋದಿ ಸಲಹೆಗಾರ ಅಮರ್ ಜಿತ್ ಸಿನ್ಹಾ ರಾಜಿನಾಮೆ!
ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಾಲಯ(ಪಿಎಂಒ)ದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ ಹಿರಿಯ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಾಲಯ(ಪಿಎಂಒ)ದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ ಹಿರಿಯ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.
ಪಿಎಂಒ ದಲ್ಲಿ ಸಾಮಾಜಿಕ ಸಂಬಂಧ ವ್ಯವಹಾರಗಳ ನೋಡಿಕೊಳ್ಳುತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿ ಅಮರ್ ಜಿತ್ ಸಿನ್ಹಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಬಿಹಾರ ಕೇಡರ್ ನ ಅಮರ್ ಜಿತ್ ಸಿನ್ಹಾ 1983ರ ತಂಡದ ಐಎಎಸ್ ಅಧಿಕಾರಿ. 2019ರಲ್ಲಿ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿಯಾಗಿ ನಿವೃತ್ತಿಗೊಂಡ ನಂತರ 2020ರ ಫೆಬ್ರವರಿಯಲ್ಲಿ ಎರಡು ವರ್ಷಗಳ ಕಾಲ ಪ್ರಧಾನಿ ಕಾರ್ಯಾಲಯದ ಸಲಹೆಗಾರರಾಗಿ ನೇಮಕಗೊಂಡಿದ್ದರು.
ಆದರೆ, ಇನ್ನೂ ಏಳು ತಿಂಗಳು ಅಧಿಕಾರವಧಿ ಇರುವಾಗಲೇ ತಮ್ಮ ಹುದ್ದೆಗೆ ರಾಜೀನಾಮೆ ಮಾಡುವುದು ಗಮನಾರ್ಹ. ಈ ಮೊದಲು ಪ್ರಧಾನಿ ಕಾರ್ಯಾಲಯದ ಪ್ರಧಾನ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಂಪುಟ ಕಾರ್ಯದರ್ಶಿ ಪಿ.ಕೆ.ಸಿನ್ಹಾ ರಾಜೀನಾಮೆ ನೀಡಿದ ಕೆಲವು ತಿಂಗಳಲ್ಲಿ ಅಮರ್ ಜಿತ್ ಸಿನ್ಹಾ ಹುದ್ದೆಗೆ ರಾಜೀನಾಮೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮರ್ ಜಿತ್ ಸಿನ್ಹಾ ತಮ್ಮ ರಾಜಿನಾಮೆಗೆ ಯಾವುದೇ ಕಾರಣ ನೀಡಿಲ್ಲ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


