ಹತ್ಯೆ ಪ್ರಕರಣ: ಕುಸ್ತಿ ಪಟು ಸುಶೀಲ್ ಕುಮಾರ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ ಪೊಲೀಸರು
ಒಲಂಪಿಕ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್ ಸೇರಿ 19 ಮಂದಿ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ.

ನವದೆಹಲಿ: ಒಲಂಪಿಕ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್ ಸೇರಿ 19 ಮಂದಿ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ.
ಕಿರಿಯ ರಾಷ್ಟ್ರಿಯ ಕುಸ್ತಿ ಚಾಂಪಿಯನ್ ನ್ನು ಛತ್ರಸಾಲ್ ಸ್ಟೇಡಿಯಂ ನಲ್ಲಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಚಾರ್ಜ್ ಶೀಟ್ ದಾಖಲಾಗಿದ್ದು, ಸುಶೀಲ್ ಕುಮಾರ್ ಪ್ರಮುಖ ಆರೋಪಿಯಾಗಿದ್ದಾರೆ.
ಅಂತಿಮ ವರದಿಯಲ್ಲಿ ಸುಶೀಲ್ ಕುಮಾರ್ ಹೆಸರಿದ್ದು, ಸಿಎಂಎಂ ಸತ್ವೀರ್ ಸಿಂಗ್ ಲಾಂಬ ಅವರಿಗೆ ಸಲ್ಲಿಸಲಾಗಿದೆ. ಈ ವರೆಗೂ ಪ್ರಕರಣದಲ್ಲಿ 15 ಆರೋಪಿಗಳನ್ನು ಬಂಧಿಸಲಾಗಿದ್ದು ಇನ್ನೂ 5 ಮಂದಿಯ ಬಂಧನವಾಗಬೇಕಿದೆ.
23 ವರ್ಷದ ಕುಸ್ತಿಪಟು ಸಾಗರ್ ಧನ್ಕರ್ ಹಾಗೂ ಆತನ ಸ್ನೇಹಿತರಾದ ಸೋನು ಹಾಗೂ ಅಮಿತ್ ಕುಮಾರ್ ಮೇಲೆ ಮೇ.4-5 ರಂದು ಸುಶೀಲ್ ಕುಮಾರ್ ಹಾಗೂ ಸಹಚರರು ಹಲ್ಲೆ ನಡೆಸಿದ್ದರು ತತ್ಪರಿಣಾಮ ಸಾಗರ್ ಧನ್ಕರ್ ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಾಕ್ಷ್ಯದಲ್ಲಿ ಸುಶೀಲ್ ಕುಮಾರ್ ಹಾಗೂ ಆತನ ಸಹಚರರು ಹಲ್ಲೆ ನಡೆಸಿದ್ದು ಸ್ಪಷ್ಟವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


