ಸಂಸದನಾಗಿರುತ್ತೀನಿ ಆದರೆ ಹೆಚ್ಚು ದಿನ ರಾಜಕೀಯದಲ್ಲಿ ಇರಲ್ಲ- ಬಾಬುಲ್ ಸುಪ್ರಿಯೋ
ಗಾಯಕ ಬಾಬುಲ್ ಸುಪ್ರಿಯೋ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಮನವೊಲಿಸುವಲ್ಲಿ ಭಾರತೀಯ ಜನತಾ ಪಾರ್ಟಿ ಸೋಮವಾರ ಯಶಸ್ವಿಯಾಗಿದೆ.

ನವದೆಹಲಿ: ಗಾಯಕ ಬಾಬುಲ್ ಸುಪ್ರಿಯೋ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಮನವೊಲಿಸುವಲ್ಲಿ ಭಾರತೀಯ ಜನತಾ ಪಾರ್ಟಿ ಸೋಮವಾರ ಯಶಸ್ವಿಯಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಬುಲ್ ಸುಪ್ರಿಯೋ, ಸಂಸದನಾಗಿ ಸಾಂವಿಧಾನಿಕ ಜವಾಬ್ದಾರಿಗಳನ್ನು ಮುಂದುವರೆಸುತ್ತೇನೆ ಆದರೆ, ರಾಜಕೀಯದಿಂದ ಹಿಂದೆ ಸರಿಯುತ್ತೀನಿ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಮಂತ್ರಿ ಮಂಡಳಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡಿದ್ದ ಎರಡು ಅವಧಿ ಸಂಸದರು ಆಗಿರುವ ಬಾಬುಲು ಸುಪ್ರಿಯೋ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆ. ಪಿ. ನಡ್ಡಾ ತಮ್ಮೊಂದಿಗೆ ಮಾತನಾಡಿದ್ದು, ಅವರ ಸಲಹೆಗಳ ಬಗ್ಗೆ ಚಿಂತಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


