ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ
ನಿರೀಕ್ಷಿತ ಸಿಬಿಎಸ್ ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಮೊಬೈಲ್, ಆಪ್ ಮತ್ತು ಎಸ್ ಎಂಎಸ್ ಮೂಲಕ ಈ ಲಿಂಕ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಮಂಡಳಿ ತಿಳಿಸಿದೆ.

ನವದೆಹಲಿ:ಬಹು ನಿರೀಕ್ಷಿತ ಸಿಬಿಎಸ್ ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.ವಿದ್ಯಾರ್ಥಿಗಳು ಈ ಲಿಂಕ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಮಂಡಳಿ ತಿಳಿಸಿದೆ.
ಈ ಬಾರಿ ಕೋವಿಡ್-19 ಎರಡನೇ ಅಲೆ ಉಲ್ಬಣವಾದ ಹಿನ್ನೆಲೆಯಲ್ಲಿ ಭೌತಿಕವಾಗಿ ಪರೀಕ್ಷೆಗಳನ್ನು ಮಂಡಳಿ ನಡೆಸಿರಲಿಲ್ಲ. ಪರ್ಯಾಯ ಮೌಲ್ಯಮಾಪನ ನೀತಿಯಡಿ ಫಲಿತಾಂಶವನ್ನು ಮಂಡಳಿ ಪ್ರಕಟಿಸಿದೆ.
57 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಶೇಕಡಾ 95ಕ್ಕಿಂತ ಹೆಚ್ಚು ಫಲಿತಾಂಶ ಗಳಿಸಿದರೆ, 2 ಲಕ್ಷ ವಿದ್ಯಾರ್ಥಿಗಳು ಶೇಕಡಾ 90ರಿಂದ 95ರಷ್ಟು ಫಲಿತಾಂಶ ಗಳಿಸಿದ್ದಾರೆ. 16 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಫಲಿತಾಂಶ ಪ್ರಕ್ರಿಯೆ ಹಂತದಲ್ಲಿದೆ. ಈ ವರ್ಷ ಮೆರಿಟ್ ಘೋಷಣೆಯಾಗುವುದಿಲ್ಲ.
ಸಿಬಿಎಸ್ ಇ ನೀತಿ ಪ್ರಕಾರ, ಪ್ರತಿ ವರ್ಷದಂತೆ ಪ್ರತಿ ವಿಷಯಕ್ಕೂ 20 ಅಂಕಗಳು ಆಂತರಿಕ ಮೌಲ್ಯಮಾಪನಕ್ಕೆ, 80 ಅಂಕಗಳನ್ನು ವರ್ಷವಿಡೀ ವಿವಿಧ ಪರೀಕ್ಷೆಗಳು ಅಥವಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಸಾಧನೆಯ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ. ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಿದ ನಂತರ 10 ನೇ ತರಗತಿಯ ವಿದ್ಯಾರ್ಥಿಗಳ ಮೌಲ್ಯಮಾಪನದ ವಿಧಾನಕ್ಕೆ ಸಂಬಂಧಿಸಿದ ಮನವಿಗೆ ಪ್ರತಿಕ್ರಿಯಿಸಲು ದೆಹಲಿ ಹೈಕೋರ್ಟ್ ಮಂಡಳಿಗೆ ಅವಕಾಶ ನೀಡಿತ್ತು.
ವಿದ್ಯಾರ್ಥಿಗಳು ಲಿಂಕ್ 1 — https://bit.ly/3ikdkPl, ಲಿಂಕ್ 2 — https://bit.ly/3lDJ1Fp, ಮತ್ತು ಲಿಂಕ್ 3 — https://bit.ly/2TOxZBo ಮೂಲಕ ಫಲಿತಾಂಶ ವೀಕ್ಷಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


