ದೆಹಲಿಯಲ್ಲಿ ಶರದ್ ಯಾದವ್ ಭೇಟಿ ಮಾಡಿದ ಲಾಲು, ಚಿರಾಗ್ ಪಾಸ್ವಾನ್ ಗೆ ಬೆಂಬಲ
ದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಶರದ್ ಯಾದವ್ ಅವರನ್ನು ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಮಂಗಳವಾರ ಭೇಟಿ ಮಾಡಿದರು.

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಶರದ್ ಯಾದವ್ ಅವರನ್ನು ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಮಂಗಳವಾರ ಭೇಟಿ ಮಾಡಿದರು ಮತ್ತು ಇಬ್ಬರೂ ನಾಯಕರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌ಜೆಡಿ ನಾಯಕ, ಶರದ್ ಯಾದವ್, ಮುಲಾಯಂ ಸಿಂಗ್ ಯಾದವ್ ಅವರಂತಹ ಸಮಾಜವಾದಿ ನಾಯಕರ ಅನುಪಸ್ಥಿತಿಯು ಸಂಸತ್ತಿನಲ್ಲಿ ಜನರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಲಕ್ಷಿಸಲು ಕಾರಣವಾಗಿದೆ ಎಂದರು.
ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಅವರನ್ನು ಬೆಂಬಲಿಸಿದ ಲಾಲು ಪ್ರಸಾದ್ ಯಾದವ್ ಅವರು, ಯುವ ಸಂಸದ ವೈಷಮ್ಯದ ಹೊರತಾಗಿಯೂ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದರು.
ಚಿರಾಗ್ ಪಾಸ್ವಾನ್ ಮತ್ತು ಅವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪರವಾಗಿ ಮಾತನಾಡಿದ ಲಾಲು, ಜನ ಎಲ್‌ಜೆಪಿ ನಾಯಕನ ಜೊತೆ ಇದ್ದಾರೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಹೇಳಿದರು.
ಆರ್‌ಜೆಡಿ ಮುಖ್ಯಸ್ಥರೊಂದಿಗೆ ಪಕ್ಷದ ಸಂಸದರಾದ ಪ್ರೇಮ್ ಚಂದ್ ಗುಪ್ತಾ ಮತ್ತು ಮಿಸಾ ಭಾರತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


