2026ರ ನಂತರ ತೆಲಂಗಾಣ, ಆಂಧ್ರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ: ಕೇಂದ್ರ
2026ರ ನಂತರವೇ ಸಹೋದರ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.

ನವದೆಹಲಿ: 2026ರ ನಂತರವೇ ಸಹೋದರ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.
ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆಯನ್ನು ಜಮ್ಮು ಮತ್ತು ಕಾಶ್ಮೀರದೊಂದಿಗೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಎ ರೇವಂತ್ ರೆಡ್ಡಿಗೆ ಮಾಹಿತಿ ನೀಡಿದರು.
"ಪ್ರತಿ ರಾಜ್ಯದ ವಿಧಾನಸಭೆಯಲ್ಲಿನ ಒಟ್ಟು ಸ್ಥಾನಗಳ ಸಂಖ್ಯೆಯನ್ನು 2026 ರ ನಂತರ ಮೊದಲ ಜನಗಣತಿ ಪ್ರಕಟಿಸಿದ ನಂತರ ಸರಿಪಡಿಸಲಾಗುವುದು" ಎಂದು ರೇವಂತ್ ರೆಡ್ಡಿಗೆ ಸಚಿವರು ಉತ್ತರ ನೀಡಿದರು.
ಕಾಂಗ್ರೆಸ್ ಸದಸ್ಯರು ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರದ ಜೊತೆಯಲ್ಲಿ ತೆಲಂಗಾಣದಲ್ಲಿ ಏಕಕಾಲದಲ್ಲಿ ಕ್ಷೇತ್ರಗಳ ಮರು ವಿಂಗಡಣೆಯನ್ನು ಕೈಗೊಳ್ಳಲು ಯೋಜಿಸುತ್ತಿದೆಯೇ ಎಂದು ತಿಳಿಯಲು ಬಯಸಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


