ಕೇಂದ್ರ ಸಚಿವ ಅಮಿತ್ ಶಾ ಭೇಟಿ ಮಾಡಿದ ಶರದ್ ಪವಾರ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿ ಮಾಡಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ ಮಾಡಿದ್ದು, ಹಲವು ವಿಷಯಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆ.

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿ ಮಾಡಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ ಮಾಡಿದ್ದು, ಹಲವು ವಿಷಯಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆ. ಸಕ್ಕರೆ ಬೆಲೆ ಮತ್ತು ಪೆಟ್ರೋಲ್ ನಲ್ಲಿ ಎಥೆನಾಲ್ ಮಿಶ್ರಣ ಸಂಬಂಧ ಸಮಾಲೋಚನೆ ನಡೆಸಿದ್ದಾರೆ.
ರಾಷ್ಟ್ರೀಯ ರಾದ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಫೆಡರೇಶನ್ ಮುಖ್ಯಸ್ಥ ಹಾಗೂ ರಾಯಘಡದ ಎನ್ ಸಿಪಿ ಸಂಸದ ಜಯಪ್ರಕಾಶ್ ದಾಂಡೆಗಾಂಕರ್ ಅಮಿತ್ ಶಾ ಜೊತೆಗೆ ಉಪಸ್ಥಿತರಿದ್ದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ಪ್ರಸ್ತುತದಲ್ಲಿನ ಸಕ್ಕರೆ ಮಾರಾಟದ ಬಗ್ಗೆ ಚರ್ಚೆ ನಡೆಸಲಾಗಿದೆ. ಇದು ಉತ್ಪಾದನೆಯ ಬೆಲೆಕ್ಕಿಂತ ಕಡಿಮೆಯಿದೆ. ಇದರ ಬಗ್ಗೆ ಸರ್ಕಾರ ಪರಿಶೀಲಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.
ಪೆಟ್ರೋಲಿಯಂ ಉತ್ಪನ್ನಗಳೊಂದಿಗೆ ಎಥೆನಾಲ್ ಮಿಶ್ರಣವನ್ನು ಹೆಚ್ಚಿಸುವ ಅಗತ್ಯವಿದೆ ಎಂಬುದರ ಬಗ್ಗೆಯೂ ಮಾತನಾಡಿ ರುವುದಾಗಿ ಮಾಜಿ ಕೃಷಿ ಸಚಿವರೂ ಆಗಿರುವ ಪವಾರ್ ತಿಳಿಸಿದರು. ಸಕ್ಕರೆ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳ ಬಗ್ಗೆ ಪರಿಶೀಲಿಸುವುದಾಗಿ ಅಮಿತ್ ಶಾ ಭರವಸೆ ನೀಡಿರುವುದಾಗಿ ಎನ್ ಸಿಪಿ ಮುಖ್ಯಸ್ಥ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


