ಡಿಸೆಂಬರ್ 2023ರೊಳಗೆ ಅಯೋಧ್ಯೆ ರಾಮ ಮಂದಿರ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.
ಕಳೆದ ವರ್ಷ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. ಆದರೆ, ಉದ್ದೇಶಿತ ದೇವಾಲಯದ ನಿವೇಶನದ ಅಡಿಯಲ್ಲಿ ನೀರು ಕಂಡುಬಂದ ನಂತರ ಜನವರಿಯಲ್ಲಿ ಕೆಲಸವನ್ನು ಸ್ಥಗಿತಗೊಳಿಸಲಾಗಿತ್ತು.
ಸದ್ಯ, ಎಂಜಿನಿಯರ್ ಗಳು ದೇವಾಲಯದ ಅಡಿಪಾಯದ ಕೆಲಸ ಮಾಡುತ್ತಿದ್ದಾರೆ. ಮುಂದಿನ ಸೆಪ್ಟೆಂಬರ್ 15ರ ಒಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ನವೆಂಬರ್ ಬಳಿಕ ಎರಡನೇ ಹಂತದ ಕಾಮಗಾರಿ ಆರಂಭಿಸುವ ಸಾಧ್ಯತೆಯಿದೆ. ಇನ್ನೆರಡು ವರ್ಷಗಳಲ್ಲಿ ದೇಗುಲದ ಪ್ರಮುಖ ಕಾರ್ಯ ಮುಗಿಯಲಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


