ದೇಶ

ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಟ್ವಿಟರ್ ಗೆ ಸೂಚನೆ

ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ದಲಿತ ಬಾಲಕಿಯ ಕುಟುಂಬದ ಫೋಟೋವೊಂದನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬುಧವಾರ ಟ್ವಿಟರ್ ಗೆ ಸೂಚಿಸಿದೆ

ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಟ್ವಿಟರ್ ಗೆ ಸೂಚನೆ
ರಾಹುಲ್ ಗಾಂಧಿ
Published On :

ನವದೆಹಲಿ: ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ದಲಿತ ಬಾಲಕಿಯ ಕುಟುಂಬದ ಫೋಟೋವೊಂದನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬುಧವಾರ ಟ್ವಿಟರ್ ಗೆ ಸೂಚಿಸಿದೆ. ಇದು ಪೋಕ್ಸೊ ಕಾಯ್ದೆ ಮತ್ತು ಬಾಲ ನ್ಯಾಯ ಉಲ್ಲಂಘನೆ ಎಂದು ಹೇಳಿದೆ.

ರಾಹುಲ್ ಗಾಂಧಿ ಬುಧವಾರ ಒಂಬತ್ತು ವರ್ಷದ ಬಾಲಕಿಯ ಕುಟುಂಬಸ್ಥರನ್ನು ಭೇಟಿ ಮಾಡಿದ್ದರು. ನ್ಯಾಯ ದೊರಕಿಸುವಲ್ಲಿ ನಿಮ್ಮೊಂದಿಗೆ ಇರುತ್ತೇನೆ. ಒಂದು ಇಂಚು ಹೆಜ್ಜೆ ಕೂಡಾ ಹಿಂದೆ ಸರಿಯಲ್ಲ ಎಂದು ಹೇಳಿದ್ದರು. ತದನಂತರ ಬಾಲಕಿಯ ಪೋಷಕರ ಭೇಟಿಯ ಫೋಟೋವೊಂದನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದರು. ಹೆತ್ತವರ ಕಣ್ಣೀರು ಒಂದೇ ಒಂದು ವಿಷಯವನ್ನು ಹೇಳುತ್ತಿದೆ, ಅವರ ಮಗಳು, ಈ ದೇಶದ ಮಗಳು, ನ್ಯಾಯಕ್ಕೆ ಅರ್ಹಳು ಮತ್ತು ನ್ಯಾಯದ ಹಾದಿಯಲ್ಲಿ ನಾನು ಅವರೊಂದಿಗೆ ಇದ್ದೇನೆ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದರು. 

ಈ ಸಂಬಂಧ ಟ್ವೀಟರ್ ಸ್ಥಾನಿಕ ಆಡಳಿತಾಧಿಕಾರಿಗೆ ಪತ್ರವೊಂದನ್ನು ಕಳುಹಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ಸಂತ್ರಸ್ತೆಯ ಕುಟುಂಬಸ್ಥರ ಫೋಟೋವೊಂದನ್ನು ಹಂಚಿಕೊಂಡಿದ್ದು, ಅವರು ಬಾಲಕಿಯ ತಂದೆ ತಾಯಿ ಎಂದು ಹೇಳಿಕೊಂಡಿರುವ ಬಗ್ಗೆ ದೂರು ಸ್ವೀಕರಿಸಿರುವುದಾಗಿ ಹೇಳಿದೆ.  

ಈ ಫೋಟೋದಲ್ಲಿ ಸಂತ್ರಸ್ತೆಯ ತಂದೆ ಮತ್ತು ತಾಯಿಯ ಮುಖಗಳನ್ನು ನೋಡಬಹುದು, ಇದು ಹುಡುಗಿಯ ಗುರುತನ್ನು ಬಹಿರಂಗಪಡಿಸುತ್ತದೆ ಆದ್ದರಿಂದ ಟ್ವಿಟರ್ ನಲ್ಲಿ ಅಪ್ತಾಪ್ತ ಬಾಲಕಿಯ ಕುಟುಂಬಸ್ಥರ ಫೋಟೋ ಹಂಚಿಕೆ, ಪೋಕ್ಸೊ ಕಾಯ್ದೆಯ ಸೆಕ್ಷನ್ 23, ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 74, ಐಪಿಸಿ ಸೆಕ್ಷನ್ 228 ಎ ಉಲ್ಲಂಘನೆಯಾಗಿದೆ ಎಂದು ಮಕ್ಕಳ ಹಕ್ಕುಗಳ ಸಂಸ್ಥೆ ಹೇಳಿದೆ.

ಟ್ವಿಟರ್ ಖಾತೆ ನಿರ್ವಹಿಸುತ್ತಿರುವವರ ವಿರುದ್ಧ ಕ್ರಮಕ್ಕಾಗಿ ದೂರನ್ನು ವರ್ಗಾಯಿಸಲಾಗಿದ್ದು, ಟ್ವಿಟರ್ ಫ್ಲಾಟ್ ಫಾರಂನಿಂದ ಟ್ವೀಟ್ ಗಳನ್ನು ತೆಗೆಯಬೇಕು ಎಂದು ಸೂಚಿಸಿರುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮೂರು ದಿನಗಳೊಳಗೆ ಕ್ರಮ ಈ ವಿಚಾರಕ್ಕೆ ತೆಗೆದುಕೊಂಡ ವರದಿ ಕಳುಹಿಸಬೇಕು ಎಂದು ಆಯೋಗ ಹೇಳಿದೆ.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.