ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿಗೆ 2 ವರ್ಷ: ತ್ರಿವರ್ಣ ಧ್ವಜ ಹಾರಿಸಿ ಬಿಜೆಪಿ ಸಂಭ್ರಮ, ಪಿಡಿಪಿಯಿಂದ 'ಶೋಕಾಚರಣೆ ದಿನ'
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಗುರುವಾರಕ್ಕೆ ಎರಡು ವರ್ಷವಾಗಿದ್ದು, ಬಿಜೆಪಿ ಕಣಿವೆಯಲ್ಲಿ ತಿರಂಗಾ ರ್ಯಾಲಿಗಳನ್ನು ನಡೆಸುವ ಮೂಲಕ ಎರಡನೇ ವಾರ್ಷಿಕೋತ್ಸವವನ್ನು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಗುರುವಾರಕ್ಕೆ ಎರಡು ವರ್ಷವಾಗಿದ್ದು, ಬಿಜೆಪಿ ಕಣಿವೆಯಲ್ಲಿ ತಿರಂಗಾ ರ್ಯಾಲಿಗಳನ್ನು ನಡೆಸುವ ಮೂಲಕ ಎರಡನೇ ವಾರ್ಷಿಕೋತ್ಸವವನ್ನು ಆಚರಿಸಿತು.
ಆದರೆ ಪಿಡಿಪಿ ಇದನ್ನು "ಜಮ್ಮು ಮತ್ತು ಕಾಶ್ಮೀರದ ಶೋಕ ದಿನ" ಎಂದು ಘೋಷಿಸಿತು ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿತು.
ನ್ಯಾಷನಲ್ ಕಾನ್ಫರೆನ್ಸ್(ಎನ್ಸಿ) ಅಧ್ಯಕ್ಷ ಮತ್ತು ಸಂಸತ್ ಸದಸ್ಯ ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಜನರ ಸಂಕ್ಷಿಪ್ತ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ಮರುಸ್ಥಾಪನೆಗಾಗಿ ತಮ್ಮ ಪಕ್ಷ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಹೇಳಿದರು.
ಅನಂತನಾಗ್ ಜಿಲ್ಲೆಯ ಖಾನಬಾಲ್ನ ಬಿಜೆಪಿಯ ಮುನ್ಸಿಪಲ್ ಕೌನ್ಸಿಲರ್ ರೊಮಸಿಯಾ ರಫೀಕ್ ಅವರು ಖಾನಬಾಲ್ನ ಪದವಿ ಕಾಲೇಜ್ ಬಳಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಕಣಿವೆಯಲ್ಲಿ ಪಕ್ಷದ ಸಂಭ್ರಮಾಚರಣೆಗೆ ಚಾಲನೆ ನೀಡಿದರು.
ಇನ್ನು ಬಂಡಿಪೋರಾ ಬಿಜೆಪಿ ಜಿಲ್ಲಾ ಅಧ್ಯಕ್ಷ ಅಬ್ದುಲ್ ರೆಹಮಾನ್ ಟಿಕ್ರಿ ಅವರು, ಪಕ್ಷದ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು.
ಶ್ರೀನಗರದಲ್ಲಿ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ನೇತೃತ್ವದಲ್ಲಿ ಹಲವಾರು ಪಿಡಿಪಿ ನಾಯಕರು ಮತ್ತು ಕಾರ್ಯಕರ್ತರು ಕಪ್ಪು ಪಟ್ಟಿಗಳನ್ನು ಧರಿಸಿ ಶೇರ್-ಇ-ಕಾಶ್ಮೀರ ಪಾರ್ಕ್ ಬಳಿಯ ಪಕ್ಷದ ಮುಖ್ಯ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


