ದೇಶ

ದೇಶದಲ್ಲಿ ಕೋವಿಡ್-19 ಮತ್ತೆ ಏರಿಕೆ: 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣ ಪತ್ತೆ; 533 ಮಂದಿ ಸಾವು

ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಕೋವಿಡ್-19 ಮತ್ತೆ ಏರಿಕೆ: 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣ ಪತ್ತೆ; 533 ಮಂದಿ ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಗುರುವಾರ 24 ಗಂಟೆಗಳ ಅಂತರದಲ್ಲಿ 42,982 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 3,18,12,114ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 533 ಮಂದಿ ಸೋಂಕಿತರು ಸಾವಿಗೀಡಾಗಿದ್ದು, ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ  4,26,290ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 41,726 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ ಗುಣಮುಖರಾದವರ ಸಂಖ್ಯೆ 3,09,74,748ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,11,076 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.  

ನಿನ್ನೆ ದೇಶಾದ್ಯಂತ 16,64,030 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ದೇಶದಲ್ಲಿ ಈ ವರೆಗೂ ನಡೆಸಿದ ಕೋವಿಡ್ ಪರೀಕ್ಷೆಗಳ ಸಂಖ್ಯೆ 47,48,93,363ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.