ಕೋವಿಡ್ ವಿರುದ್ಧ ಹೋರಾಡಲು ಭಾರತಕ್ಕೆ ಮತ್ತಷ್ಟು ಬಲ: ಜಾನ್ಸನ್ ಆ್ಯಂಡ್ ಜಾನ್ಸನ್ ಸಿಂಗಲ್ ಡೋಸ್ ಲಸಿಕೆ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ
ಕೋವಿಡ್ ವಿರುದ್ಧ ಹೋರಾಡಲು ಅಮೆರಿಕಾ ಮೂಲದ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿ ಅಭಿವೃದ್ಧಿಪಡಿಸಿರುವ ಸಿಂಗಲ್ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಭಾರತ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಶನಿವಾರ ತಿಳಿದುಬಂದಿದೆ.

ನವದೆಹಲಿ: ಕೋವಿಡ್ ವಿರುದ್ಧ ಹೋರಾಡಲು ಅಮೆರಿಕಾ ಮೂಲದ ಜಾನ್ಸನ್ ಅಂಡ್ ಜಾನ್ಸನ್ ಕಂಪನಿ ಅಭಿವೃದ್ಧಿಪಡಿಸಿರುವ ಸಿಂಗಲ್ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಭಾರತ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಶನಿವಾರ ತಿಳಿದುಬಂದಿದೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, 'ಭಾರತದಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಸಿಂಗಲ್ ಡೋಸ್ ಕೋವಿಡ್ 19 ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಭಾರತ ಈಗ ಐದು ಇಯುಎ ಲಸಿಕೆಗಳನ್ನು ಹೊಂದಿದಂತಾಗಿದೆ. ಇದು ಕೋವಿಡ್ ವಿರುದ್ಧದ ಭಾರತದ ಸಮಗ್ರ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ' ಎಂದು ಹೇಳಿದ್ದಾರೆ.
ಜಾನ್ಸನ್ ಆ್ಯಂಡ್ ಜಾನ್ಸನ್ ಸಂಸ್ಥೆಯು ತನ್ನ ಕೊರೊನಾ ವೈರಸ್ ಲಸಿಕೆಯ ತುರ್ತು ಬಳಕೆ ಅನುಮೋದನೆ (ಇಯುಎ) ಕೋರಿ ಮನವಿ ಮಾಡಿತ್ತು. ಅದಕ್ಕೆ ಶನಿವಾರ ಒಪ್ಪಿಗೆ ದೊರಕಿದೆ.
ಆಗಸ್ಟ್ 5ರಂದು ಜಾನ್ಸನ್ ಆ್ಯಂಡ್ ಜಾನ್ಸನ್ ಇಯುಎಗೆ ಅರ್ಜಿ ಸಲ್ಲಿಸಿತ್ತು. ಭಾರತದಲ್ಲಿ ಬಯಾಲಾಜಿಕಲ್ ಇ ಕಂಪನಿಯೊಂದಿಗೆ ಸೇರಿ ಲಸಿಕೆಗಳನ್ನು ಕಂಪನಿ ಉತ್ಪಾದಿಸಲಿದೆ. ಈ ಲಸಿಕೆಯು ಒಂದೇ ಡೋಸ್ ಹೊಂದಿದ್ದು, ಶೇ 85ರಷ್ಟು ಪರಿಣಾಮಕಾರಿ ಎಂಬ ಫಲಿತಾಂಶ ನೀಡಿದೆ ಎಂದು ಕಂಪನಿ ತಿಳಿಸಿತ್ತು.
ಭಾರತವು ಈವರೆಗೂ ಕೋವಿಶೀಲ್ಡ್, ಕೋವ್ಯಾಕ್ಸಿನ್, ಸ್ಪುಟ್ನಿಕ್ ಹಾಗೂ ಮಾಡೆರ್ನಾ ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಈ ಪಟ್ಟಿಗೆ ಇದೀಗ ಜಾನ್ಸನ್ ಆ್ಯಂಡ್ ಜಾನ್ಸನ್ ಲಸಿಕೆ ಕೂಡ ಹೊಸದಾಗಿ ಸೇರ್ಪಡೆಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


