ಜಮ್ಮು ಕಾಶ್ಮೀರದಲ್ಲಿ ಉಗ್ರ ದಾಳಿ: ಓರ್ವ ಪೊಲೀಸ್ ಸಾವು, ಇಬ್ಬರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕ್ರಾಸಿಂಗ್‌ನಲ್ಲಿ ಪೊಲೀಸ್ ತಂಡದ ಮೇಲೆ ಭಯೋತ್ಪಾದಕರು 'ಮನಬಂದಂತೆ' ಗುಂಡು ಹಾರಿಸಿದ್ದರಿಂದ ಒಬ್ಬ ಪೊಲೀಸ್ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕ್ರಾಸಿಂಗ್‌ನಲ್ಲಿ ಪೊಲೀಸ್ ತಂಡದ ಮೇಲೆ ಭಯೋತ್ಪಾದಕರು 'ಮನಬಂದಂತೆ' ಗುಂಡು ಹಾರಿಸಿದ್ದರಿಂದ ಒಬ್ಬ ಪೊಲೀಸ್ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಜಿ ಸಚಿವ ಅಬ್ದುಲ್ ಮಜೀದ್ ಪದಾರ್ ಅವರನ್ನು ಅವರ ನಿವಾಸಕ್ಕೆ ಕರೆದೊಯ್ದು ಬಿಟ್ಟು ನಂತರ ವಾಪಸ್ ಬರುವಾಗ ಆದಿಜನ್ ಕ್ರಾಸಿಂಗ್‌ನಲ್ಲಿ ಟ್ರಾಫಿಕ್ ನಿರ್ವಹಣೆಯಲ್ಲಿ ನಿರತರಾಗಿದ್ದಾಗ ಪೊಲೀಸರು ಉಗ್ರರ ದಾಳಿಗೆ ಗುರಿಯಾಗಿದ್ದಾರೆ.
'ಕುಲ್ಗಾಂ ಜಿಲ್ಲೆಯ ದಮ್ಹಾಲ್ ಹಂಜಿಪೋರಾದ ಪೊಂಬೈನಲ್ಲಿ ಭಯೋತ್ಪಾದಕರು ಪೊಲೀಸ್ ತಂಡದ ಮೇಲೆ ಗುಂಡಿನ ದಾಳಿ ನಡೆಸಿದರು. ಇದರ ಪರಿಣಾಮವಾಗಿ ಮೂವರು ಪೊಲೀಸರು ಗಾಯಗೊಂಡರು ಎಂದು ಅಧಿಕಾರಿಯೊಬ್ಬರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


