ತ್ರಿಪುರಾ ಸಿಎಂ ಬಿಪ್ಲಬ್ ದೇವ್ ಹತ್ಯೆ ಯತ್ನ: ಮೂವರ ಬಂಧನ
ತ್ರಿಪುರಾ ಸಿಎಂ ಬಿಪ್ಲಬ್ ದೇವ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಅಗರ್ತಲ: ತ್ರಿಪುರಾ ಸಿಎಂ ಬಿಪ್ಲಬ್ ದೇವ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ಶ್ಯಾಮಪ್ರಸಾದ್ ಮುಖರ್ಜಿ ಅವರಿದ್ದ ಅಧಿಕೃತ ನಿವಾಸ ಸಂಜೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಬಿಪ್ಲಬ್ ದೇವ್ ಅವರ ಭದ್ರತಾ ವಲಯದ ಮೂಲಕ ಕಾರು ಹಾದು ಹೋಗಿ ಆತಂಕ ಮೂಡಿಸಿತ್ತು.
ಡಿಕ್ಕಿ ಹೊಡೆಯಲು ಯತ್ನಿಸಿದ್ದ ವಾಹನದಿಂದ ಪಕ್ಕಕ್ಕೆ ಸರಿದು ಬಿಪ್ಲಬ್ ದೇವ್ ಅಪಾಯದಿಂದ ಪಾರಾಗಿದ್ದರು. ಆದರೆ ಅವರ ಭದ್ರತಾ ಸಿಬ್ಬಂದಿಗಳ ಪೈಕಿ ಓರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕಾರನ್ನು ತಡೆಯಲು ಸಿಎಂ ಭದ್ರತಾ ಸಿಬ್ಬಂದಿಗಳು ಯತ್ನಿಸಿದರಾದರೂ ಅದು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆ ಬಳಿಕ ಗುರುವಾರದಂದು ಕೆರ್ಚೌಮುಹನಿಯಿಂದ ಮೂವರನ್ನು ಬಂಧಿಸಲಾಗಿದ್ದು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಮ್ಯಾಜಿಸ್ಟ್ರೇಟ್ ಪಿಪಿ ಪೌಲ್ ಎದುರು ಆರೋಪಿಗಳನ್ನು ಹಾಜರುಪಡಿಸಲಾಗಿದ್ದು, 14 ದಿನಗಳ ವಶಕ್ಕೆ ನೀಡಲಾಗಿದೆ.
ಆರೋಪಿಗಳು 20 ವರ್ಷದ ವಯಸ್ಸಿನವರಾಗಿದ್ದು, ಹತ್ಯೆ ಯತ್ನದ ಕಾರಣ ಇನ್ನಷ್ಟೇ ತಿಳಿಯಬೇಕಿದೆ, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


