ದೇಶ

ಭೀಕರ ಅಪಘಾತ: ಟ್ರಕ್ ಗೆ ಕಾರು ಢಿಕ್ಕಿ, 5 ಸಾವು, ಮೂವರಿಗೆ ಗಂಭೀರ ಗಾಯ

ರಾಜಸ್ಥಾನದಲ್ಲಿ ಶನಿವಾರ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭೀಕರ ಅಪಘಾತ: ಟ್ರಕ್ ಗೆ ಕಾರು ಢಿಕ್ಕಿ, 5 ಸಾವು, ಮೂವರಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
Published On :

ಜೈಪುರ: ರಾಜಸ್ಥಾನದಲ್ಲಿ ಶನಿವಾರ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನದ ನಗೌರ್ ನ ಕುಚಮಮ್ ಸಿಟಿ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಟ್ರಕ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದವರ ಪೈಕಿ 5ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡ ಇತರೆ ಮೂವರನ್ನು ಆ್ಯಂಬುಲೆನ್ಸ್ ನಲ್ಲಿ ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂತಾಪ ಸೂಚಿಸಿದ ಸಿಎಂ ಗೆಹ್ಲೋಟ್
ಇದೇ ವೇಳೆ ಅಪಘಾತಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. 'ನಾಗೌರ್ ನ ಕುಚಮಾನ್ ಸಿಟಿ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 5 ಜನರ ಸಾವು ಅತ್ಯಂತ ದುಃಖಕರವಾಗಿದೆ. ದುಃಖಿತ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ದೇವರು ಅವರಿಗೆ ಶಕ್ತಿಯನ್ನು ನೀಡಲಿ ಮತ್ತು ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿಕೊಳ್ಳುತೇನೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.