ದೇಶ

ಕೋವಿಡ್-19: ದೇಶಾದ್ಯಂತ 39,070 ಹೊಸ ಸೋಂಕು ಪ್ರಕರಣ ವರದಿ, 491 ಸಾವು: ಆರೋಗ್ಯ ಸಚಿವಾಲಯ

ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಸಾಂಕ್ರಾಮಿಕ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 39,070 ಹೊಸ ಸೋಂಕು ಪ್ರಕರಣಗಳು ಮತ್ತು 491 ಸಾವು ವರದಿಯಾಗಿದೆ.

ಕೋವಿಡ್-19: ದೇಶಾದ್ಯಂತ 39,070 ಹೊಸ ಸೋಂಕು ಪ್ರಕರಣ ವರದಿ, 491 ಸಾವು: ಆರೋಗ್ಯ ಸಚಿವಾಲಯ
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
Published On :

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಸಾಂಕ್ರಾಮಿಕ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 39,070 ಹೊಸ ಸೋಂಕು ಪ್ರಕರಣಗಳು ಮತ್ತು 491 ಸಾವು ವರದಿಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ದೇಶಾದ್ಯಂತ 24 ಗಂಟೆಗಳಲ್ಲಿ 39,070 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 3,19,34,455ಕ್ಕೆ ಏರಿಕೆಯಾಗಿದೆ.

ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 491 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,27,862ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ದೇಶಾದ್ಯಂತ  43,910 ಸೋಂಕಿತರು ಗುಣಮುಖರಾಗಿದ್ದು. ಆ ಮೂಲಕ ಗುಣಮುಖರ ಸಂಖ್ಯೆ 3,10,99,771 ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ 4,06,822 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 55,91,657 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಿದ್ದು ಆ ಮೂಲಕ ದೇಶದಲ್ಲಿ ಒಟ್ಟಾರೆ ಲಸಿಕೆ ವಿತರಣೆ ಪ್ರಮಾಣ 50,68,10,492ಕ್ಕೆ ಏರಿಕೆಯಾಗಿದೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.