ದೇಶ

ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಅಶ್ವನಿ ಉಪಾಧ್ಯಾಯ ಸೇರಿ 6 ಮಂದಿ ದೆಹಲಿ ಪೊಲೀಸರ ವಶಕ್ಕೆ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಸೋಮವಾರ ಆಯೋಜಿಸಿದ್ದ ಜಾಥಾದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಅಶ್ವನಿ ಉಪಾಧ್ಯಾಯ ಸೇರಿ 6 ಮಂದಿ ದೆಹಲಿ ಪೊಲೀಸರ ವಶಕ್ಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಸೋಮವಾರ ಆಯೋಜಿಸಿದ್ದ ಜಾಥಾದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

ಅಶ್ವಿನಿ ಉಪಾಧ್ಯಾಯ, ವಿನೋದ್ ಶರ್ಮಾ, ದೀಪಕ್ ಸಿಂಗ್, ವಿನೀತ್ ಕ್ರಾಂತ್, ಪ್ರೀತ್ ಸಿಂಗ್ ಹಾಗೂ ದೀಪಕ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ. ವಿಚಾರಣೆ ಬಳಿಕ ಆರು ಮಂದಿಯನ್ನೂ ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ದೇಶದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ವಸಾಹತು ಕಾಲದ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ಪ್ರಚೋದನಾಕಾರಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಲಾಗಿದೆ. ಇದರಂತೆ ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 153-ಎ (ವಿಭಿನ್ನ ಗುಂಪುಗಳ ನಡುವೆ ವೈರತ್ವ ಪ್ರಚೋದಿಸುವುದು) ಅಡಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು.

ಅಲ್ಲದೆ, ಅವರು ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ ಹಾಗೂ ಸೆಕ್ಷನ್ 188 (ಸಾರ್ವಜನಿಕ ಸೇವಕರು ಜಾರಿಗೊಳಿಸಿದ ಆದೇಶಗಳನ್ನು ಪಾಲಿಸದೆ ಇರುವುದು) ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುವ ಡಿಡಿಎಂಎ ಕಾಯ್ದೆಯ ಸೆಕ್ಷನ್ 51ರ ಅಡಿ ಕೂಡ ಪ್ರಕರಣಗಳನ್ನು ದಾಖಲಿಸಲಾಗಿದೆ.

ಅನುಮತಿ ಪಡೆಯದೆಯೇ ರ್ಯಾಲಿ ನಡೆಸಿದ್ದ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಯಾವುದೇ ಪೊಲೀಸರು ಸ್ಥಳದಲ್ಲಿ ಹಾಜರಿರಲಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು. ಆದರೂ ಜನರು ಗುಂಪುಗೂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.