ಪಂಜಾಬ್: ಶಾಲಾ ಬಸ್ ಗೆ ಕಾರು ಡಿಕ್ಕಿ, ದಂಪತಿ ಸಾವು, 10 ಮಕ್ಕಳಿಗೆ ಗಾಯ
ಅಮೃತಸರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಕಾರು ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಜಮ್ಮು ಮೂಲದ ದಂಪತಿ ಸಾವನ್ನಪ್ಪಿದ್ದು, 10 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಸರ: ಅಮೃತಸರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಕಾರು ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಜಮ್ಮು ಮೂಲದ ದಂಪತಿ ಸಾವನ್ನಪ್ಪಿದ್ದು, 10 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಖಾಸಗಿ ಶಾಲೆಯ ಬಸ್ ಸೋಹಿಯಾ ಗ್ರಾಮದ ಬಳಿ ಹೆದ್ದಾರಿಗೆ ಬಂದು ಸೇರಿಕೊಳ್ಳುತ್ತಿತ್ತು. ಆದರೆ ಬಸ್ ಚಾಲಕ ಕಾರು ಹಿಂದಿನಿಂದ ಬರುತ್ತಿರುವುದನ್ನು ಗಮನಿಸದ ಹಿನ್ನೆಲೆಯಲ್ಲಿ ಕಾರು ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಕಾರು ಬಸ್ಸಿಗೆ ಡಿಕ್ಕಿ ಹೊಡೆದಾಗ, ಅದರ ಹಿಂದೆ ಬರುತ್ತಿದ್ದ ಮರಳು ತುಂಬಿದ ಟ್ರಕ್ ಚಾಲಕ ಬಲವಾಗಿ ಬ್ರೇಕ್ ಹಾಕಿದ್ದಾರೆ. ಆದರೆ ವಾಹನ ಸ್ಕಿಡ್ ಆಗಿ ಉರುಳಿಬಿದ್ದು ಟ್ರಕ್ ಚಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಬಸ್ ಚಾಲಕ ಸಹ ಗಾಯಗೊಂಡಿದ್ದು, ಮಕ್ಕಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಮಕ್ಕಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಅಪಾಯದಿಂದ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


