ಮಾಜಿ ಶಾಸಕಿ ಅಲ್ಕಾ ಲಂಬಾ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಬೆದರಿಕೆ: ದೆಹಲಿ ವ್ಯಕ್ತಿ ಬಂಧನ
ಮಾಜಿ ಶಾಸಕಿ ಹಾಗೂ ದೆಹಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ 30 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನವದೆಹಲಿ: ಮಾಜಿ ಶಾಸಕಿ ಹಾಗೂ ದೆಹಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ 30 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಅಲ್ಕಾ ಲಂಬಾ ಸೋಮವಾರ ಕಳುಹಿಸಿದ ಇ-ಮೇಲ್ ಮೂಲಕ ದೂರು ಸ್ವೀಕರಿಸಲಾಗಿದೆ. ಆಕೆ ಟ್ವಿಟರ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ವ್ಯಕ್ತಿಯೊಬ್ಬ ತನ್ನ ವಿರುದ್ಧ ನಿಂದನೆ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾನೆ ಎಂದು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ದೆಹಲಿ ಹಿರಿಯ ಪೊಲೀಸರನ್ನು ಭೇಟಿ ಮಾಡಿ ದೂರು ಸಲ್ಲಿಸಿರುವುದಾಗಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಮಹಿಳೆಯರನ್ನು ಬಹಿರಂಗವಾಗಿ ಬೆದರಿಸುವ ಮತ್ತು ಸಾಮರಸ್ಯವನ್ನು ಸೃಷ್ಟಿಸುವ ಕೋಮುವಾದಿ ಮನಸ್ಥಿತಿಯ ಜನರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಲಂಬಾ ಹೇಳಿದ್ದಾರೆ. ಇಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೇ ಅವರು ಇದೇ ಚಾಳಿ ಮುಂದುವರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ತನಿಖೆಯ ಸಮಯದಲ್ಲಿ, ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದರು ಮತ್ತು ಆತನನ್ನು ಮನೆಯಿಂದ ವಶಕ್ಕೆ ಪಡೆದರು. ಆರೋಪಿಯನ್ನು ಉತ್ತಮ್ ನಗರದ ಮತಿಯಾಲಾ ಗ್ರಾಮದ ನಿವಾಸಿ ವಿಕಾಸ್ ಸೆಹ್ರಾವತ್ ಎಂದು ಗುರುತಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಅತುಲ್ ಕುಮಾರ್ ಠಾಕೂರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


