ರೋಹಿಂಗ್ಯಾ ಮುಸ್ಲಿಮರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ: ಕೇಂದ್ರ ಸರ್ಕಾರ
ರೋಹಿಂಗ್ಯಾ ಮುಸ್ಲಿಂ ವಲಸಿಗರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ.

ನವದೆಹಲಿ: ರೋಹಿಂಗ್ಯಾ ಮುಸ್ಲಿಂ ವಲಸಿಗರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ.
ಸೂಕ್ತ ಪ್ರಯಾಣ ದಾಖಲೆ ಇಲ್ಲದೇ ದೇಶದೊಳಗೆ ಬರುವ ವಿದೇಶಿ ಪ್ರವಾಸಿಗರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಲಾಗುವುದು ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಹೇಳಿದರು. ಕೆಲ ರೋಹಿಂಗ್ಯಾ ವಲಸಿಗರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ವರದಿಗಳು ಇರುವುದಾಗಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದರು.
ಅಕ್ರಮ ವಲಸಿಗರ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಲು ಗುಪ್ತಚರ ಏಜೆನ್ಸಿ ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ಸಲಹೆ ನೀಡುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿರುವುದಾಗಿ ನಿತ್ಯಾನಂದ ರೈಹೇಳಿದರು.
ರೋಹಿಂಗ್ಯಾ ಮುಸ್ಲಿಂರ ಜೀವನ ಚರಿತ್ರೆ ಮತ್ತು ಬಯೋ ಮೆಟ್ರಿಕ್ ಸೆರೆ ಹಿಡಿಯುಲು ಮತ್ತು ನಕಲಿ ಭಾರತೀಯ ದಾಖಲೆ ರದ್ದುಪಡಿಸಲು ಸೂಚಿಸಿರುವುದಾಗಿ ತಿಳಿಸಿದರು.
ಕಾನೂನು ವಿನಾಯಿತಿ ಅಡಿಯಲ್ಲಿ ಗಡಿಪಾರು ಪ್ರಕ್ರಿಯೆಗಳು ಸೇರಿದಂತೆ ಸೂಕ್ತ ಕಾನೂನು ಪ್ರಕ್ರಿಯೆ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಅವರು ಸದನಕ್ಕೆ ಮಾಹಿತಿ ನೀಡಿದರು. ವಿದೇಶಿ ಪ್ರಜೆಗಳು ಅಕ್ರಮ ವಲಸೆ ಮತ್ತು ಧೀರ್ಘ ವಾಸ ಸಮಸ್ಯೆ ನಿಭಾಯಿಸಲು ಮಾರ್ಚ್ 30 ರಂದು ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ರೈ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


