ಹಿಮಾಚಲದಲ್ಲಿ ಭೂಕುಸಿತ: ಪ್ರಯಾಣಿಕರಿದ್ದ ಬಸ್ ಮೇಲೆ ಉರುಳಿದ ಪರ್ವತ; 10 ಸಾವು, 13 ಮಂದಿ ರಕ್ಷಣೆ, ಭೀಕರ ವಿಡಿಯೋ
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಹತ್ತು ಮಂದಿ ಮೃತಪಟ್ಟಿದ್ದಾರೆ. ಇನ್ನು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ.Himachal Pradesh Landslide

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಹತ್ತು ಮಂದಿ ಮೃತಪಟ್ಟಿದ್ದಾರೆ. ಇನ್ನು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆಯ ಆರಂಭದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಕನಿಷ್ಠ 13 ಜನರನ್ನು ಅವಶೇಷಗಳಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಅವರು ತಿಳಿಸಿದ್ದಾರೆ.
ಇಲ್ಲಿಯವರೆಗೆ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಟಾಟಾ ಸುಮೋದಲ್ಲಿದ್ದ 8 ಮಂದಿ ಮೃತಪಟ್ಟಿದ್ದು ಅವರ ಮೃತದೇಹಗಳನ್ನು ತೆಗೆಯಲಾಗಿದೆ ಎಂದರು.
ಕಿನ್ನೌರ್ ಜಿಲ್ಲೆಯ ನಿಚಾರ್ ತಹಸಿಲ್‌ನ ನಿಗುಲಸರಿಯಲ್ಲಿನ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ ಐದರಲ್ಲಿರುವ ಚೌರಾ ಗ್ರಾಮದಲ್ಲಿ ಮಧ್ಯರಾತ್ರಿ ಭೂಕುಸಿತ ಸಂಭವಿಸಿದೆ ಎಂದು ಅವರು ಹೇಳಿದರು.
ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ(ಎಚ್‌ಆರ್‌ಟಿಸಿ) ಬಸ್ ಚಾಲಕ ಮಹಿಂದರ್ ಪಾಲ್ ಸೇರಿದಂತೆ 13 ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮುನ್ನ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ(ಎಚ್‌ಆರ್‌ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎಂದು ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ಹೇಳಿದ್ದರು.
ಸ್ಥಳಕ್ಕೆ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಮತ್ತು ಸ್ಥಳೀಯ ರಕ್ಷಣಾ ತಂಡಗಳು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಿನ್ನೌರ್ ಉಪ ಆಯುಕ್ತರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


