ಗದ್ದಲ ಕೋಲಾಹಲದಲ್ಲೇ ಕೊನೆಯಾದ ಅಧಿವೇಶನ: ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಪೆಗಾಸಸ್ ವಿವಾಹ, ಕೋವಿಡ್ ನಿರ್ವಹಣೆ ಸೇರಿದಂತೆ ಮತ್ತಿತರ ವಿಷಯಗಳು ಲೋಕಸಭೆಯಲ್ಲಿ ಸತತ 23 ದಿನಗಳಿಂದಲೂ ಪ್ರತಿಧ್ವನಿಸಿ ಯಾವುದೇ ವಿಷಯಗಳ ಚರ್ಚೆ ಇಲ್ಲದೇ ಅಂತ್ಯಗೊಂಡಿದೆ.

ನವದೆಹಲಿ: ಪೆಗಾಸಸ್ ವಿವಾಹ, ಕೋವಿಡ್ ನಿರ್ವಹಣೆ ಸೇರಿದಂತೆ ಮತ್ತಿತರ ವಿಷಯಗಳು ಲೋಕಸಭೆಯಲ್ಲಿ ಸತತ 23 ದಿನಗಳಿಂದಲೂ ಪ್ರತಿಧ್ವನಿಸಿ ಯಾವುದೇ ವಿಷಯಗಳ ಚರ್ಚೆ ಇಲ್ಲದೇ ಅಂತ್ಯಗೊಂಡಿದೆ. ಇಂದೂ ಕೂಡ ಭಾರೀ ಗದ್ದಲ-ಕೋಲಾಹಲ ಸೃಷ್ಟಿಯಾದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಕಲಾಪವನ್ನು ಮೊಟಕುಗೊಳಿಸಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಕಲಾಪ ಆರಂಭವಾಗುತ್ತಿದ್ದಂತೆಯೇ ಇಂದೂ ಕೂಡ ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್, ಕೋವಿಡ್ ವಿರ್ವಹಣೆ ಹಾಗೂ ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಗದ್ದಲ ಉಂಟಾದ ಪರಿಣಾಮ ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ಜುಲೈ 19ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭಗೊಂಡಿತ್ತು. ಆಗಸ್ಟ್ 13ರವರೆಗೂ ಅಧಿವೇಶನ ನಡೆಯಬೇಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


