ದೇಶ

ಹಿಮಾಚಲ ಪ್ರದೇಶದ ಕಿನ್ನೌರ್‌ನಲ್ಲಿ ಭಾರೀ ಭೂಕುಸಿತ, ಅವಶೇಷಗಳಡಿ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಭಾರೀ ಭೂಕುಸಿತ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ 40ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದೆ ಎಂದು ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದ ಕಿನ್ನೌರ್‌ನಲ್ಲಿ ಭಾರೀ ಭೂಕುಸಿತ, ಅವಶೇಷಗಳಡಿ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ
ಭೂಕುಸಿತ
Published On :

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಭಾರೀ ಭೂಕುಸಿತ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ 40ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದೆ ಎಂದು ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ತಿಳಿಸಿದ್ದಾರೆ.

40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ(ಎಚ್‌ಆರ್‌ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎಂದು ಸಾದಿಕ್ ಹೇಳಿದ್ದಾರೆ.

ಬಸ್ ಕಿನ್ನೌರಿನ ರೆಕಾಂಗ್ ಪಿಯೊದಿಂದ ಶಿಮ್ಲಾಕ್ಕೆ ಹೋಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಸ್ಥಳಕ್ಕೆ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಮತ್ತು ಸ್ಥಳೀಯ ರಕ್ಷಣಾ ತಂಡಗಳು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಿನ್ನೌರ್ ಉಪ ಆಯುಕ್ತರು ತಿಳಿಸಿದ್ದಾರೆ.

ಕಲ್ಲುಗಳು ಇನ್ನೂ ಬೀಳುತ್ತಿವೆ, ಇದು ರಕ್ಷಣಾ ಕಾರ್ಯಾಚರಣೆಗೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಸಾದಿಕ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.