ದೇಶ

ಕೇಂದ್ರೀಯ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ತಡೆ: ಕೇರಳ ಸರ್ಕಾರಕ್ಕೆ ತೀವ್ರ ಹಿನ್ನಡೆ

ಕೇರಳದ ಪಿಣರಾಯಿ ವಿಜಯನ್ ಸರ್ಕಾರಕ್ಕೆ ತೀವ್ರ ಹಿನ್ನೆಡೆಯುಂಟಾಗಿದ್ದು, ಕೇಂದ್ರೀಯ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

ಕೇಂದ್ರೀಯ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ತಡೆ: ಕೇರಳ ಸರ್ಕಾರಕ್ಕೆ ತೀವ್ರ ಹಿನ್ನಡೆ
ಪಿಣರಾಯಿ ವಿಜಯನ್ (ಸಂಗ್ರಹ ಚಿತ್ರ)
Published On :

ತಿರುವನಂತಪುರಂ: ಕೇರಳದ ಪಿಣರಾಯಿ ವಿಜಯನ್ ಸರ್ಕಾರಕ್ಕೆ ತೀವ್ರ ಹಿನ್ನೆಡೆಯುಂಟಾಗಿದ್ದು, ಕೇಂದ್ರೀಯ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. 

ಹೈಕೋರ್ಟ್ ನ್ಯಾಯಾಧೀಶರಾದ ವಿ.ಕೆ ಮೋಹನನ್ ನೇತೃತ್ವದಲ್ಲಿ ಕೇರಳ ಸರ್ಕಾರ ರಚಿಸಿದ್ದ ನ್ಯಾಯಾಂಗ ಆಯೋಗಕ್ಕೆ ಹೈಕೋರ್ಟ್ ತಡೆ ನೀಡಿದೆ. ಚಿನ್ನ ಹಾಗೂ ಡಾಲರ್ ಕಳ್ಳಸಾಗಣೆ ಪ್ರಕರಣ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ತನಿಖೆಗೆ ನ್ಯಾಯಾಂಗ ತನಿಖೆಗೆ ಕೇರಳ ಸರ್ಕಾರ ಸಮಿತಿ ರಚನೆ ಮಾಡಿತ್ತು. 

ಜಾರಿ ನಿರ್ದೇಶನಾಲಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದ್ದು, ಈ ಸಂಬಂಧ ಸಿಎಂ ಪಿಣರಾಯಿ ವಿಜಯನ್ ಹಾಗೂ ತನಿಖಾ ಆಯೋಗಕ್ಕೆ ನೊಟೀಸ್ ಜಾರಿಗೊಳಿಸಲಾಗುತ್ತಿದೆ ಎಂದು ಕೋರ್ಟ್ ಹೇಳಿದೆ. 

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಟರಾಜ್ ಹಾಗೂ ಎಸ್ ವಿ ರಾಜು, ಸಹಾಯಕ ಸಾಲಿಸಿಟರ್ ಜನರಲ್ ಪಿ ವಿಜಯ್ ಕುಮಾರ್ ಹಾಗೂ ವಿಶೇಷ ಪ್ರಾಸಿಕ್ಯೂಟರ್ ಟಿಎ ಉನ್ನಿಕೃಷ್ಣನ್ ಇ.ಡಿ ಹಾಗೂ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. 

ಸರ್ಕಾರ ಹೊರಡಿಸಿದ್ದ ಅಧಿಸೂಚನೆಯಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯಿಂದ ಮುಖ್ಯಮಂತ್ರಿಗಳು, ಮಂತ್ರಿಗಳ ವಿರುದ್ಧ ಪಿತೂರಿ ನಡೆಸಲಾಗಿತ್ತೇ? ಎಂಬ ಬಗ್ಗೆ ತನಿಖೆ ನಡೆಸಲು ಆಯೋಗವನ್ನು ಕೇಳಲಾಗಿತ್ತು.

ಸೀಮಾ ಸುಂಕ ಹಾಗೂ ಜಾರಿ ನಿರ್ದೇಶನಾಲಯದ ಏಜೆನ್ಸಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಆಡಳಿತ ಪಕ್ಷವನ್ನು ತಪ್ಪಾಗಿ ಸಿಲುಕಿಸಲು ಯತ್ನಿಸುತ್ತಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.