ದೇಶ

ನಂದಿಗ್ರಾಮ ಚುನಾವಣೆ ಫಲಿತಾಂಶದ ವಿರುದ್ಧ ಮಮತಾ ಅರ್ಜಿ ವಿಚಾರಣೆ ನ.15ಕ್ಕೆ ಮುಂದೂಡಿದ ಕೋಲ್ಕತ್ತಾ ಹೈಕೋರ್ಟ್

ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡುವಂತೆ ಕೋರಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಮನವಿಯನ್ನು ಕಲ್ಕತ್ತಾ ಹೈಕೋರ್ಟ್ ಸ್ವೀಕರಿಸಿದೆ.

ನಂದಿಗ್ರಾಮ ಚುನಾವಣೆ ಫಲಿತಾಂಶದ ವಿರುದ್ಧ ಮಮತಾ ಅರ್ಜಿ ವಿಚಾರಣೆ ನ.15ಕ್ಕೆ ಮುಂದೂಡಿದ ಕೋಲ್ಕತ್ತಾ ಹೈಕೋರ್ಟ್
ಮಮತಾ ಬ್ಯಾನರ್ಜಿ
Published On :

ಕೋಲ್ಕತ್ತಾ: ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡುವಂತೆ ಕೋರಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಮನವಿಯನ್ನು ಕಲ್ಕತ್ತಾ ಹೈಕೋರ್ಟ್ ಸ್ವೀಕರಿಸಿದೆ.

ಈ ಅರ್ಜಿಯ ವಿಚಾರಣೆಯನ್ನು ಬಂಗಾಳದಿಂದ ಹೊರಗೆ ವರ್ಗಾಯಿಸುವಂತೆ ಕೋರಿ ಸುವೇಂದು ಅಧಿಕಾರಿ ಸಲ್ಲಿಸಿದ್ದ ಅರ್ಜಿ ಸುುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವ ಹಿನ್ನಲೆಯಲ್ಲಿ ಮಮತಾ ಸಲ್ಲಿಸಿದ್ದ ಚುನಾವಣಾ ಅರ್ಜಿಯ ವಿಚಾರಣೆಯನ್ನು ಕೊಲ್ಕತ್ತಾ ಹೈಕೋರ್ಟ್ ನವೆಂಬರ್ 15ಕ್ಕೆ ಮುಂದೂಡಿದೆ. 

ಸುವೇಂದು ಅಧಿಕಾರಿಯ ಪರವಾಗಿ ಹಾಜರಾದ ವಕೀಲ ಜಯದೀಪ್ ಕರ್, ಅರ್ಜಿಯನ್ನು ಮುಂದೂಡಬೇಕು ಎಂದು ನ್ಯಾಯಮೂರ್ತಿಗಳಲ್ಲಿ ವಿನಂತಿಸಿಕೊಂಡರು. 

ಈ ಹಿಂದೆ, ನ್ಯಾಯಮೂರ್ತಿ ಕೌಶಿಕ್ ಚಂದಾ ಅವರು ಚುನಾವಣಾ ಅರ್ಜಿಯ ವಿಚಾರಣೆಯನ್ನು ಕೈಬಿಟ್ಟ ನಂತರ ಮಮತಾ ಮೇಲೆ 5 ಲಕ್ಷ ರೂ. ವೆಚ್ಚವನ್ನು ವಿಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.