ಮುಂದಿನ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರೈತರ ಮತ: ಅಖಿಲೇಶ್ ಯಾದವ್
ಈ ಬಾರಿ ರೈತರು ಒಗ್ಗಟ್ಟಾಗಿ ಬಿಜೆಪಿಯ ವಿರುದ್ಧ ಮತ ಚಲಾಯಿಸಲಿದ್ದಾರೆ’ ಎಂದು ಸಮಾಜವಾದಿ ಪಕ್ಷದ(ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.

ಲಕ್ನೋ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಗೆ ರೈತರ ನೆನಪಾಗಿದೆ. ಆದರೆ ಈ ಬಾರಿ ರೈತರು ಒಗ್ಗಟ್ಟಾಗಿ ಬಿಜೆಪಿಯ ವಿರುದ್ಧ ಮತ ಚಲಾಯಿಸಲಿದ್ದಾರೆ’ ಎಂದು ಸಮಾಜವಾದಿ ಪಕ್ಷದ(ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶದಲ್ಲಿ ರೈತರೊಂದಿಗೆ ಸಂಪರ್ಕ ಸಾಧಿಸಲು ಬಿಜೆಪಿ ‘ಕಿಸಾನ್ ಸಮ್ಮೇಳನ’ ನಡೆಸಲು ಮುಂದಾಗಿದೆ. ‘ಅನ್ನದಾತ’, ಮತದಾರನಾಗುವ ಸಮಯ ಬಂದಾಗ ಬಿಜೆಪಿಗೆ ರೈತರ ನೆನಪಾಗಿದೆ. ಆದರೆ ಬಿಜೆಪಿಯ ಈ ಜಾಲಕ್ಕೆ ರೈತರು ಬೀಳುವುದಿಲ್ಲ’ ಎಂದು ಅವರು ಹೇಳಿದ್ದಾರೆ.
2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಇದೇ 16ರಿಂದ 23ರ ತನಕ ‘ಕಿಸಾನ್ ಸಂವಾದ’ ಕಾರ್ಯಕ್ರಮವನ್ನು ಏರ್ಪಡಿಸಿದೆ. ಇದರ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


