ಹಿಮಾಚಲದ ಕಿನ್ನೌರ್‌ನಲ್ಲಿ ಭೂಕುಸಿತ: ಮತ್ತೆ ನಾಲ್ವರ ಶವ ಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಸ್ಥಳದಲ್ಲಿ ಗುರುವಾರ ಮತ್ತೆ ನಾಲ್ಕು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಸ್ಥಳದಲ್ಲಿ ಗುರುವಾರ ಮತ್ತೆ ನಾಲ್ಕು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಇಂದು ಪುನರಾರಂಭಗೊಂಡ ನಂತರ ಸ್ಥಳದಿಂದ ಇನ್ನೂ ನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ ಎಂದು ಕಿನ್ನೌರ್ ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಈವರೆಗೆ 14 ಶವಗಳನ್ನು ಪತ್ತೆ ಮಾಡಲಾಗಿದೆ. ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ(ಎಚ್‌ಆರ್‌ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಭೂಕುಸಿತದ ನಂತರ ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಅವರು ಹೇಳಿದ್ದಾರೆ.
ಆದಾಗ್ಯೂ, ಒಂದು ಬೊಲೆರೊ ಕಾರನ್ನು ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್), ಐಟಿಬಿಪಿ ಮತ್ತು ಸ್ಥಳೀಯ ಪೊಲೀಸ್ ಹಾಗೂ ಗೃಹರಕ್ಷಕ ದಳದ ಸದಸ್ಯರು ಜಂಟಿಯಾಗಿ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆ ಇಂದು ಬೆಳಗ್ಗೆ 6 ಗಂಟೆಗೆ ಪುನರಾರಂಭವಾಯಿತು ಎಂದು ಮೊಕ್ತಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


