ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಸೇವಾವಧಿ ವಿಸ್ತರಣೆ
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವೆಯನ್ನು ಕೇಂದ್ರ ಸರ್ಕಾರ ಒಂದು ವರ್ಷ ಕಾಲ ವಿಸ್ತರಿಸುವ ತೀರ್ಮಾನ ತೆಗೆದುಕೊಂಡಿದೆ.

ನವದೆಹಲಿ: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವೆಯನ್ನು ಕೇಂದ್ರ ಸರ್ಕಾರ ಒಂದು ವರ್ಷ ಕಾಲ ವಿಸ್ತರಿಸುವ ತೀರ್ಮಾನ ತೆಗೆದುಕೊಂಡಿದೆ.
ಅಜಯ್ ಕುಮಾರ್ ಭಲ್ಲಾ ಅವರ ಹಾಲಿ ಸೇವೆ ಮುಂದಿನವಾರ ಕೊನೆಯಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರ ಸೇವೆಯನ್ನು ಮತ್ತೆ ಒಂದು ವರ್ಷ ವಿಸ್ತರಿಸಿದೆ.
ಅಸ್ಸಾಂ-ಮೇಘಾಲಯ ಕೇಡರ್‌ನ 1984ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾದ ಭಲ್ಲಾ ಅವರು ಆಗಸ್ಟ್ 2019ರಲ್ಲಿ ಗೃಹ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.
"ಸಂಪುಟ ನೇಮಕಾತಿ ಸಮಿತಿಯು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲ ಅವರ ಈಗಿನ ಅವಧಿ, ಅಂದರೆ 22.08.2021 ರಿಂದ ಒಂದು ವರ್ಷ ವಿಸ್ತರಿಸಲು ಅನುಮೋದನೆ ನೀಡಿದೆ" ಎಂದು ಸಿಬ್ಬಂದಿ ಸಚಿವಾಲಯದಿಂದ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅವರ ಅಧಿಕಾರಾವಧಿಯನ್ನು ಆಗಸ್ಟ್ 22, 2021 ರವರೆಗೆ ವಿಸ್ತರಿಸಲಾಗಿತ್ತು.
ಭಲ್ಲಾ ಅವರು 60 ವರ್ಷ ಪೂರ್ಣಗೊಳಿಸಿದ ನಂತರ ನವೆಂಬರ್ 2020ರಲ್ಲಿ ನಿವೃತ್ತರಾಗಬೇಕಿತ್ತು. ಆದರೆ ಈಗ ಎರಡನೇ ಬಾರಿ ಅವರ ಸೇವಾವಧಿಯನ್ನು ವಿಸ್ತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


