ರಜೌರಿ: ಬಿಜೆಪಿ ನಾಯಕನ ಮನೆ ಮೇಲೆ ಗ್ರೆನೇಡ್ ದಾಳಿ, 3 ವರ್ಷದ ಮಗು ಬಲಿ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಬಿಜೆಪಿ ನಾಯಕರೊಬ್ಬರ ಮನೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂರು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಬಿಜೆಪಿ ನಾಯಕರೊಬ್ಬರ ಮನೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂರು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಗ್ರರು ನಿನ್ನೆ ರಾತ್ರಿ ರಾಜೌರಿ ಜಿಲ್ಲೆಯ ಖಂಡ್ಲಿ ಪ್ರದೇಶದಲ್ಲಿರುವ ಬಿಜೆಪಿ ನಾಯಕ ಜಸ್ಬೀರ್ ಸಿಂಗ್ ಎಂಬುವವರ ನಿವಾಸದ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು.
ದಾಳಿ ವೇಳೆ ಮೂರು ವರ್ಷದ ಮಗು, ಬಿಜೆಪಿ ನಾಯಕ ಸೇರಿ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಘಟನೆಗೆ ಇದೀಗ ಸ್ಥಳೀಯರು ಹಾಗೂ ಬಿಜೆಪಿ ನಾಯಕನ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ನಡುವೆ ಸ್ಥಳದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಧಾವಿಸಿದ್ದು, ಕಾಲ್ಕಿತ್ತಿರುವ ಉಗ್ರರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ.
ಘಟನೆ ಸಂಬಂಧ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಮುಖ್ಯಸ್ಥ ರವಿಂದರ್ ರೈನಾ ಅವರು ಪ್ರತಿಕ್ರಿಯೆ ನೀಡಿ, ಪಾಕಿಸ್ತಾನ ಬಿಜೆಪಿ ನಾಯಕರ ಮೇಲೆ ದಾಳಿ ನಡೆಸುತ್ತಿದೆ. ಈ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಘಟನೆಗೆ ಜವಾಬ್ದಾರರಾದ ಉಗ್ರರನ್ನು ಪೊಲೀಸರು ಕೂಡಲೇ ಬಂಧನಕ್ಕೊಳಪಡಿಸಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


