ದೇಶ

ಆಗಸ್ಟ್ 16 ರಿಂದ ಪಂಜಾಬ್‌ ಪ್ರವೇಶಿಸಲು 2 ಡೋಸ್ ಕೋವಿಡ್ ಲಸಿಕೆ ಅಥವಾ ನೆಗಟಿವ್ ಆರ್‌ಟಿಪಿಸಿಆರ್ ವರದಿ ಕಡ್ಡಾಯ

ಸೋಮವಾರದಿಂದ ರಾಜ್ಯ ಪ್ರವೇಶಿಸುವ ಎಲ್ಲರಿಗೂ ಕಡ್ಡಾಯವಾಗಿ ಸಂಪೂರ್ಣ ಎರಡು ಡೋಸ್ ಕೋವಿಡ್ ಲಸಿಕೆ ಅಥವಾ ನೆಗಟಿವ್ ಆರ್‌ಟಿಪಿಸಿಆರ್ ವರದಿ ಕಡ್ಡಾಗೊಳಿಸಿ ಪಂಜಾಬ್ ಸರ್ಕಾರ ಶನಿವಾರ ಆದೇಶಿಸಿದೆ.

ಆಗಸ್ಟ್ 16 ರಿಂದ ಪಂಜಾಬ್‌ ಪ್ರವೇಶಿಸಲು 2 ಡೋಸ್ ಕೋವಿಡ್ ಲಸಿಕೆ ಅಥವಾ ನೆಗಟಿವ್ ಆರ್‌ಟಿಪಿಸಿಆರ್ ವರದಿ ಕಡ್ಡಾಯ
ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್
Published On :

ಚಂಡೀಗಢ: ಸೋಮವಾರದಿಂದ ರಾಜ್ಯ ಪ್ರವೇಶಿಸುವ ಎಲ್ಲರಿಗೂ ಕಡ್ಡಾಯವಾಗಿ ಸಂಪೂರ್ಣ ಎರಡು ಡೋಸ್ ಕೋವಿಡ್ ಲಸಿಕೆ ಅಥವಾ ನೆಗಟಿವ್ ಆರ್‌ಟಿಪಿಸಿಆರ್ ವರದಿ ಕಡ್ಡಾಗೊಳಿಸಿ ಪಂಜಾಬ್ ಸರ್ಕಾರ ಶನಿವಾರ ಆದೇಶಿಸಿದೆ.

ವಿಶೇಷವಾಗಿ ಪಾಸಿಟಿವ್ ಪ್ರಮಾಣ ಹೆಚ್ಚುತ್ತಿರುವ ಹಿಮಾಚಲ ಪ್ರದೇಶ ಮತ್ತು ಜಮ್ಮುವಿನಿಂದ ಬರುವವರ ಮೇಲೆ ಕಟ್ಟುನಿಟ್ಟಾದ ನಿಗಾ ವಹಿಸುವಂತೆ ಪಂಜಾಬ್ ಸರ್ಕಾರ ಸೂಚಿಸಿದೆ.

ಪಂಜಾಬ್ ನಲ್ಲಿ ಕೋವಿಡ್ ದೈನಂದಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯನ್ನು ದಿನಕ್ಕೆ ಕನಿಷ್ಠ 60,000 ಪರೀಕ್ಷೆಗಳಿಗೆ ಹೆಚ್ಚಿಸಲು ಆದೇಶಿಸಿದೆ.

ಪೂರ್ಣ ವ್ಯಾಕ್ಸಿನೇಷನ್ ಅಥವಾ ನೆಗಟಿವ್ ಆರ್‌ಟಿಪಿಸಿಆರ್ ವರದಿಯ ನಿಯಮವು ಪಂಜಾಬ್‌ಗೆ ರಸ್ತೆ, ರೈಲು ಅಥವಾ ವಿಮಾನದ ಮೂಲಕ ಪ್ರವೇಶಿಸುವ ಎಲ್ಲರಿಗೂ ಅನ್ವಯಿಸುತ್ತದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.